ಎರಡು ವರ್ಷದ ಹೆಣ್ಣು ಮಗುವನ್ನು ನೇಣು ಹಾಕಿ ಕೊಂದು, ನಂತರ ತಾನೂ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದ ಶಿವಲೀಲಾ ಆನಂದ (24) ಆತ್ಮಹತ್ಯೆಗೆ ಶರಣಾದ ಮಹಿಳೆ.
ಕಳೆದ ಮೂರು ವರ್ಷದ ಹಿಂದಷ್ಟೇ ಮದುವೆಯಾಗಿತ್ತು. ತವರೂರಿಂದ ಮಂಗಳವಾರ ಗಂಡನ ಮನೆಗೆ ವಾಪಸ್ ಬಂದಿದ್ದರು. ಬಂದ ದಿನ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪಿಎಸ್‌ಐ ಈದಿನ.ಕಾಮ್ ಜೊತೆಗೆ ಮಾತನಾಡಿ ತಿಳಿಸಿದ್ದಾರೆ.
👏🏻👏🏻👏🏻
👏🏻👏🏻👏🏻ಸೂಪರ್