ಮಂಗಳೂರು | ಶಿಕ್ಷಣಕ್ಕೆ ಹೊಸ ಆಯಾಮ: ವಿದ್ಯಾರ್ಥಿಗಳ ನೈಜ ಜೀವನ ಕಲಿಕೆ

Date:

ಶಿಕ್ಷಣ ಕೇವಲ ವರ್ಗ ಕೋಣೆಯಲ್ಲಿ ನಡೆಯುವುದಿಲ್ಲ. ವರ್ಗ ಕೋಣೆಯ ಹೊರಗೂ ವಿದ್ಯಾರ್ಥಿಗಳು ಕಲಿಕೆಯ ಅನುಭವ ಪಡೆಯುತ್ತಾರೆ. ವಿದ್ಯಾರ್ಥಿಗಳು ವರ್ಗ ಕೋಣೆಯ ಹೊರಗೆ ಕಲಿಕೆಯ ಅನುಭವ ಪಡೆಯಲಿ ಎಂಬ ಉದ್ದೇಶದಿಂದ ಶಾಲಾ ಪ್ರಾಚಾರ್ಯ ಫಾ. ವಿಶಾಲ್ ಅವರ ನಿರ್ದೇಶನದ ಮೇರೆಗೆ 5, 6, 7, 8ನೇ ತರಗತಿಯ ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆ, ಅರಣ್ಯ ಇಲಾಖೆ ಹಾಗೂ ಆರಕ್ಷಕ ಠಾಣೆಗಳಿಗೆ ಕರೆದುಕೊಂಡು ಹೋಗಲಾಯಿತು.

- Advertisement -

ಮಂಗಳೂರಿನ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಐದು ಮತ್ತು ಏಳನೆಯ ತರಗತಿಯ ವಿದ್ಯಾರ್ಥಿಗಳು, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೊಡನೆ ಬೆರೆತು ಪರಸ್ಪರ ಪರಿಚಯ ಮಾಡಿಕೊಂಡರು. ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಎರಡೂ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲ ವಿದ್ಯಾರ್ಥಿಗಳು ಸಂತೋಷದಿಂದ ರಸಪ್ರಶ್ನೆ ಮತ್ತು ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಮಂಗಳೂರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕಾಣಿಕೆಗಳನ್ನು ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಅರಣ್ಯ ಇಲಾಖೆಗೆ ಭೇಟಿ ನೀಡಿದ ಆರನೇ ತರಗತಿಯ ವಿದ್ಯಾರ್ಥಿಗಳು ಅರಣ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸಸಿ ನೆಡುವುದು, ಪರಿಸರ ರಕ್ಷಣೆ ಮುಂತಾದ ವಿಷಯಗಳ ಬಗ್ಗೆ ತಿಳಿದುಕೊಂಡರು. ಅರಣ್ಯ ಅಧಿಕಾರಿಗಳಾದ ಇರ್ಷಾದ್ ನೇವಾರ ಅವರು ವಿದ್ಯಾರ್ಥಿಗಳಿಗೆ ಪರಿಸರ ರಕ್ಷಣೆಯ ಬಗ್ಗೆ, ಮರಗಳ ಮಹತ್ವ ಇವುಗಳ ಕುರಿತು ಸೂಕ್ತ ಮಾಹಿತಿ ನೀಡುವುದಲ್ಲದೆ ವಿವಿಧ ಸಸಿಗಳ ಪರಿಚಯ ಮಾಡಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಅಕ್ರಮ ಸ್ಪಿರೀಟ್ ಪತ್ತೆಯಾದ ಪ್ರಕರಣ; 51 ಕೆ.ಜಿ ಗಾಂಜಾ ಪೊಲೀಸ್ ವಶಕ್ಕೆ

ಆರಕ್ಷಕ ಠಾಣೆಗೆ ಭೇಟಿ ನೀಡಿದ ಎಂಟನೇ ತರಗತಿಯ ವಿದ್ಯಾರ್ಥಿಗಳು, ಆರಕ್ಷಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸೈಬರ್ ಅಪರಾಧ, ನಾಗರಿಕ ಅಪರಾಧ ವಿವಿಧ ಅಪರಾಧಗಳಿಗೆ ದೂರು ಸಲ್ಲಿಸುವುದು ಹೇಗೆ? ಮತ್ತು ನ್ಯಾಯ ಪಡೆಯುವುದು ಹೇಗೆ? ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು. ಪೊಲೀಸ್ ಅಧಿಕಾರಿಗಳಾದ ಆರಿಫ್ ಮುಷಾಪುರಿ ಅವರು ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ಪತಿಯ ಮೇಲೆ ಹಲ್ಲೆ ನಡೆಸಿ ವಿಷ ಕುಡಿಸಿ ಕೊಲೆಗೆ ಯತ್ನಿಸಿದ ಆರೋಪ: ಪತ್ನಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಶಿರಸಿ: ಕೌಟುಂಬಿಕ ಕಲಹ ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚ್ಛೇದನ...

ಉಡುಪಿ | ಹಲ್ಲೆ, ದೌರ್ಜನ್ಯಕ್ಕೆ ಕಡಿವಾಣ ಹಾಕಿ; ವಕೀಲರ ರಕ್ಷಣೆಗೆ ಸರ್ಕಾರ ಮುಂದಾಗಲಿ

ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆ...

ಜಗಳ ಬಿಡಿಸಲು ಮುಂದಾದ ಯುವಕನಿಗೆ ಚಾಕು ಇರಿತ: 25 ವರ್ಷದ ನಂದನ್ ಸಾವು; ಕುಟುಂಬಸ್ಥರ ಆಕ್ರಂದನ

ಸ್ನೇಹಿತರ ನಡುವೆ ಕೆಲಸದ ವಿಚಾರವಾಗಿ ನಡೆಯುತ್ತಿದ್ದ ಮಾತಿನ ಚಕಮಕಿ ಬಿಡಿಸಲು ಮಧ್ಯಪ್ರವೇಶಿಸಿದ...

ಚಿಕ್ಕಮಗಳೂರು | ರಾಜಕೀಯದಲ್ಲಿ ಯುವಜನರ ಪಾತ್ರ ಬಹುಮುಖ್ಯ: ಹೆಚ್.ಡಿ ತಮ್ಮಯ್ಯ

ಆಧುನಿಕ ಯುಗದಲ್ಲಿ ರಾಜಕೀಯ ಕ್ಷೇತ್ರದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದೇಶದ...