ಮೈಸೂರು ಕಲಾಮಂದಿರದಲ್ಲಿ ಅಕ್ಕ ನಾಗಲಾಂಬಿಕೆಯ ಬದುಕು ಜೀವಂತಗೊಳಿಸಿದ ಏಕವ್ಯಕ್ತಿ ನಾಟಕ

Date:

ನಗರದ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಶನಿವಾರ ಸಂಜೆ ನಡೆದ ಏಕವ್ಯಕ್ತಿ ನಾಟಕೋತ್ಸವದ ಎರಡನೇ ದಿನದ ಕಾರ್ಯಕ್ರಮವು ಕಲಾರಸಿಕರ ಮನಸ್ಸನ್ನು ಆಳವಾಗಿ ಸ್ಪರ್ಶಿಸಿತು. ಕರ್ನಾಟಕ ಏಕೀಕರಣ ಟ್ರಸ್ಟ್ (ರಿ), ಮೈಸೂರು ವತಿಯಿಂದ ಸ್ವಾತಂತ್ರ್ಯ ಹಾಗೂ ಕರ್ನಾಟಕ ಏಕೀಕರಣ ಹೋರಾಟಗಾರ ಡಾ. ಸಿದ್ದನಾಥ ಬಳ್ಳಾರಿ ಅವರ ಸ್ಮರಣಾರ್ಥ ಆಯೋಜಿಸಿದ್ದ ನಾಟಕೋತ್ಸವದಲ್ಲಿ ಪ್ರದರ್ಶನಗೊಂಡ ‘ಅಕ್ಕ ನಾಗಲಾಂಬಿಕೆ’ ಏಕವ್ಯಕ್ತಿ ನಾಟಕವು ಪ್ರೇಕ್ಷಕರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಯಿತು.

- Advertisement -

ಕಾರ್ಯಕ್ರಮವನ್ನು ಉಪನ್ಯಾಸಕರಾದ ಶಿವಮಲ್ಲು ಕುನ್ನೂರು, ಕಾಳೀಪ್ರಸಾದ್, ಡಾ. ಸುಜಾತ ಅಕ್ಕಿ, ರಂಗಕರ್ಮಿ ಎನ್.ಎಸ್. ಗೋಪಿನಾಥ್ ಹಾಗೂ ರಂಗ ನಿರ್ದೇಶಕ ಅರಸೀಕೆರೆ ಯೋಗಾನಂದ ಅವರು ಜಂಟಿಯಾಗಿ ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಡಾ. ಸುಜಾತ ಅಕ್ಕಿ, “ಕರ್ನಾಟಕ ಏಕೀಕರಣಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಮಹನೀಯರನ್ನು ಸ್ಮರಿಸುವುದು ಹಾಗೂ ಅವರ ತ್ಯಾಗ, ಹೋರಾಟ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಹೊಣೆಗಾರಿಕೆ ಸಮಾಜದ ಮೇಲಿದೆ ಎಂದು ಅಭಿಪ್ರಾಯಪಟ್ಟರು. ಇಂತಹ ನಾಟಕೋತ್ಸವಗಳು ಇತಿಹಾಸವನ್ನು ಜನಮಾನಸಕ್ಕೆ ಪರಿಚಯಿಸುವ ಮಹತ್ವದ ಮಾಧ್ಯಮಗಳಾಗಿವೆ” ಎಂದು ಹೇಳಿದರು.

ಬಳಿಕ ಪ್ರದರ್ಶನಗೊಂಡ ‘ಅಕ್ಕ ನಾಗಲಾಂಬಿಕೆ’ ನಾಟಕವು 12ನೇ ಶತಮಾನದಲ್ಲಿ ಬಸವಾದಿ ಶರಣರು ಕಟ್ಟಿದ ಸಮಸಮಾಜದ ಕನಸಿನಲ್ಲಿ ಬಸವಣ್ಣನವರ ಅಕ್ಕ ಅಕ್ಕ ನಾಗಲಾಂಬಿಕೆಯ ಪಾತ್ರವನ್ನು ಅತ್ಯಂತ ಪರಿಣಾಮಕಾರಿಯಾಗಿ ಅನಾವರಣಗೊಳಿಸಿತು. ಸಮಾನತೆ, ಮಾನವೀಯತೆ ಹಾಗೂ ಶರಣ ಸಂಸ್ಕೃತಿಯ ಮೌಲ್ಯಗಳನ್ನು ಭಾವಪೂರ್ಣವಾಗಿ ಕಟ್ಟಿಕೊಟ್ಟ ನಾಟಕವು ಪ್ರೇಕ್ಷಕರನ್ನು ಭಾವಪರವಶರನ್ನಾಗಿಸಿತು.

ನಾಟಕದಲ್ಲಿ ಡಾ. ದಿವ್ಯ ಬಿ.ಎಸ್. ಅವರು ಅಕ್ಕ ನಾಗಲಾಂಬಿಕೆಯ ಪಾತ್ರಕ್ಕೆ ಜೀವ ತುಂಬುವುದರ ಜೊತೆಗೆ ಬಸವಣ್ಣ, ಚನ್ನಬಸವಣ್ಣ, ತಂದೆ-ತಾಯಿ ಸೇರಿದಂತೆ ಹಲವು ಪಾತ್ರಗಳನ್ನು ಏಕಾಂಗಿಯಾಗಿ ಅಭಿನಯಿಸಿ ಗಮನ ಸೆಳೆದರು. ಇದು ಅವರ ಮೊದಲ ರಂಗಪ್ರವೇಶವಾಗಿದ್ದರೂ ಅನುಭವಿ ಕಲಾವಿದೆಯೊಬ್ಬರಂತೆ ಪ್ರತಿಯೊಂದು ಪಾತ್ರದ ಭಾವ, ಸಂವೇದನೆ ಮತ್ತು ವ್ಯಕ್ತಿತ್ವವನ್ನು ಸಹಜವಾಗಿ ಅಭಿವ್ಯಕ್ತಿಸಿದರು. ಅವರ ಅಭಿನಯದ ತೀವ್ರತೆ, ಧ್ವನಿಯ ಏರಿಳಿತ ಹಾಗೂ ಭಾವಾಭಿವ್ಯಕ್ತಿಯು ಪ್ರೇಕ್ಷಕರ ಮನಸ್ಸನ್ನು ಆಳವಾಗಿ ತಟ್ಟಿದ್ದು, ಹಲವರು ಭಾವುಕರಾಗುವಂತೆ ಮಾಡಿತು.

ನಾಟಕಕ್ಕೆ ಸಿದ್ಧೇಶ್ವರ ಬದನವಾಳು ಅವರ ಸಂಗೀತವು ಭಾವಸಾಂದ್ರತೆಯನ್ನು ಮತ್ತಷ್ಟು ಹೆಚ್ಚಿಸಿತು. ಬೆಳಕಿನ ವಿನ್ಯಾಸವು ಪ್ರತಿಯೊಂದು ದೃಶ್ಯದ ಮನೋಭಾವವನ್ನು ಪರಿಣಾಮಕಾರಿಯಾಗಿ ಮೂಡಿಸಿ, ಕಲಾವಿದೆಯ ಅಭಿನಯಕ್ಕೆ ಪೂರಕವಾಗಿ ನಿಂತಿತು. ರಂಗರೂಪ ಮತ್ತು ನಿರ್ದೇಶನದಲ್ಲಿ ಅರಸೀಕೆರೆ ಯೋಗಾನಂದ ಅವರ ಕಲಾತ್ಮಕತೆ ಪ್ರತಿಯೊಂದು ದೃಶ್ಯದಲ್ಲೂ ಎದ್ದು ಕಾಣುತ್ತಿದ್ದು, ನಾಟಕದ ಯಶಸ್ಸಿಗೆ ಪ್ರಮುಖ ಕಾರಣವಾಯಿತು.

ಅಕ್ಕ ನಾಗಲಾಂಬಿಕೆಯ ಆದರ್ಶ ಬದುಕು, ಸಮಾನತೆಯ ಸಂದೇಶ ಹಾಗೂ ಶರಣ ಸಂಸ್ಕೃತಿಯ ಮೌಲ್ಯಗಳನ್ನು ಜೀವಂತವಾಗಿ ಬಿಂಬಿಸಿದ ಈ ಏಕವ್ಯಕ್ತಿ ನಾಟಕವು ಪ್ರೇಕ್ಷಕರಿಗೆ ಅಪರೂಪದ ಕಲಾನುಭವವನ್ನು ನೀಡುವುದರ ಜೊತೆಗೆ ಸಾಮಾಜಿಕ ಜಾಗೃತಿಯ ಸಂದೇಶವನ್ನೂ ಪರಿಣಾಮಕಾರಿಯಾಗಿ ಸಾರಿತು.

ಈ ಸುದ್ದಿ ಓದಿದ್ದೀರಾ?ಟ್ರಂಪ್ ಆದೇಶ: ಇರಾನ್ ಮೇಲೆ ಅಮೆರಿಕ ಭಾರೀ ವೈಮಾನಿಕ ದಾಳಿ

ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕರಾದ ನಾ. ದಿವಾಕರ್, ಹಿರಿಯ ರಂಗ ನಿರ್ದೇಶಕ ಶ್ರೀನಿವಾಸ್ ಪಾಲಹಳ್ಳಿ, ರಂಗ ನಿರ್ದೇಶಕಿ ಶೀಲಾ ಕುಮಾರಿ, ಸಾಹಿತಿ ಉಷಾ ನರಸಿಂಹನ್ ಸೇರಿದಂತೆ ಹಲವಾರು ಸಾಹಿತಿಗಳು, ರಂಗಕರ್ಮಿಗಳು ಹಾಗೂ ಕಲಾಭಿಮಾನಿಗಳು ಉಪಸ್ಥಿತರಿದ್ದು ನಾಟಕವನ್ನು ಆಸ್ವಾದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...