ದಕ್ಷಿಣ ಕನ್ನಡ | ಆಕಸ್ಮಿಕ ಬೆಂಕಿಗೆ ಆಹುತಿಯಾದ ಖಾಸಗಿ ಬಸ್‌

Date:

ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನದ ಮುಂಭಾಗ ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಮಂಗಳೂರು ಹೊರವಲಯದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಎದುರು ಘಟನೆ ನಡೆದಿದ್ದು, ಒಎಂಪಿಎಲ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ಸು ಹೊತ್ತಿ ಉರಿದಿದೆ.

ಕಟೀಲು ಭಾಗದ ಸಂಸ್ಥೆಯ ನೌಕರರನ್ನು ಅವರ ಊರುಗಳಿಗೆ ಬಿಟ್ಟು, ವಾಪಸಾಗುತ್ತಿದ್ದ ವೇಳೆ, ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬಸ್‌ ಹೊತ್ತಿ ಉರಿದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆ ಸಂಭವಿಸಿದಾಗ ಬಸ್ಸಿನಲ್ಲಿ ಡ್ರೈವರ್ ಸೇರಿ ಮೂವರು ಇದ್ದರು ಎನ್ನಲಾಗಿದೆ. ಸದ್ಯ, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಬಸ್ ಸಂಪೂರ್ಣ ಭಸ್ಮವಾಗಿದ್ದು, ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ನೀರಿನ ಟ್ಯಾಂಕರ್‌ನಿಂದ ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪೆನ್‌ಡ್ರೈವ್ ಪ್ರಕರಣ; ಪ್ರಭಾವಿ ಕುಟುಂಬದ ಅಟ್ಟಹಾಸ ಮಟ್ಟಹಾಕಲು ಒಕ್ಕಲಿಗ ಸಮುದಾಯ ಮುಂದಾಗುವುದೇ?

ಹಾಸನ ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಪೆನ್‌ಡ್ರೈವ್ ಮುಖಾಂತರ ಅಶ್ಲೀಲ...

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...