ಚಾಮರಾಜನಗರ | ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಂಕಲ್ಪ; ಗಮನ ಸೆಳೆದ ವಾಕಥಾನ್

Date:

ಚಾಮರಾಜನಗರ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಂಕಲ್ಪದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಾಕಥಾನ್‍ಗೆ ಚಾಲನೆ ನೀಡಲಾಯಿತು.

- Advertisement -

ವಿಶೇಷವಾಗಿ ಹಮ್ಮಿಕೊಳ್ಳಲಾಗಿದ್ದ ವಾಕಥಾನ್ ನಲ್ಲಿ ಪ್ರತಿಜ್ಞಾ ಸ್ವೀಕಾರ ಸೇರಿದಂತೆ ಬೃಹತ್ ಜನಜಾಗೃತಿ ಜಾಥಾ ಪಟ್ಟಣದ ನಾಗರಿಕರ ಗಮನ ಸೆಳೆಯಿತು. ನಗರದ ಚಾಮರಾಜೇಶ್ವರ ದೇವಾಲಯದ ಅವರಣದಲ್ಲಿ ಬೃಹತ್ ವಾಕಥಾನ್‍ನಲ್ಲಿ ಭಾಗವಹಿಸಲು ಸಮಾವೇಶಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕಾಲೇಜು ವಿದ್ಯಾರ್ಥಿಗಳು, ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶುಕ್ರವಾರದ ಕವಾಯತು ಮುಗಿಸಿ ವಾಕಥಾನ್ ಸೇರಿಕೊಂಡ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಜಿಲ್ಲೆಯವರೇ ಆದ ನಟ ಗಣೇಶ್ ರಾವ್ ಮತ್ತು ಅಂತರಾಷ್ಟ್ರೀಯ ಖೋ ಖೋ ಕ್ರೀಡಾಪಟು ಚೈತ್ರಾ ಅವರು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ವಾಕಥಾನ್‍ಗೆ ವಿಶೇಷ ಮೆರಗು ತಂದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರೊಂದಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಹಸಿರು ನಿಶಾನೆ ತೋರಿದರು.

ವಾಕಥಾನ್ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ” ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಆಶಯದಂತೆ ಚಾಮರಾಜನಗರವನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ನಗರದಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ವಾಕಥಾನ್ ಆಯೋಜಿತವಾಗಿದೆ. ಮಾರ್ಚ್-8ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಿಂದ ನವೆಂಬರ್ 14ರ ಮಕ್ಕಳ ದಿನಾಚರಣೆವರೆಗಿನ ಅವಧಿಯಲ್ಲಿ ಜಿಲ್ಲೆಯ ಪ್ರತಿ ಗ್ರಾಮ, ಗ್ರಾಮ ಪಂಚಾಯಿತಿ, ಹೋಬಳಿ, ತಾಲೂಕು, ಉಪ ವಿಭಾಗ ಹಾಗೂ ಜಿಲ್ಲಾಮಟ್ಟದಲ್ಲಿ ವಿಶೇಷ ಗಮನ ಸೆಳೆಯುವಂತಹ ಪರಿಣಾಮಕಾರಿ ಕಾರ್ಯಕ್ರಮಗಳ ಮೂಲಕ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಗೊಳಿಸುವ ಸದುದ್ದೇಶ ಹೊಂದಲಾಗಿದೆ ” ಎಂದರು.

” ಬಾಲ್ಯವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 18 ವರ್ಷ ತುಂಬಿರದ ಹೆಣ್ಣು ಮಕ್ಕಳು ವಿವಾಹವಾಗಬಾರದು. ಬಾಲ್ಯ ವಿವಾಹದಿಂದ ಹಲವಾರು ಸಮಸ್ಯೆಗಳು ಎದುರಾಗಲಿವೆ. ಮಕ್ಕಳ ಆರೋಗ್ಯ, ಶಿಕ್ಷಣ ಕುಂಠಿತವಾಗಲಿದೆ. ಸಂತೋಷದಿಂದ ಕಳೆಯಬೇಕಾದ ಬಾಲ್ಯವನ್ನು ಮಕ್ಕಳಿಂದ ಬಲವಂತವಾಗಿ ಕಸಿದಂತಾಗಲಿದೆ. ಕುಟುಂಬ, ಆರ್ಥಿಕ ಹಿನ್ನೆಡೆ ಮತ್ತು ಸೋಷಿಯಲ್ ಮೊಬಿಲಿಟಿಗೆ ತೊಂದರೆಯಾಗಲಿದೆ.

ಬಾಲ್ಯ ವಿವಾಹ ನಡೆದ ಮೇಲೆ ಶಿಕ್ಷೆ ಕೊಡಿಸುವುದಕ್ಕಿಂತ ಮಕ್ಕಳ ತಂದೆ-ತಾಯಿ, ಪೋಷಕರಿಗೆ ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ವ್ಯಾಪಕ ಅರಿವು ಮೂಡಿಸಿ ಬಾಲ್ಯ ವಿವಾಹ ತಡೆಯುವುದೇ ಉತ್ತಮವಾಗಿದೆ. ಜನರ ಮನ ಪರಿವರ್ತನೆ ಇಲ್ಲಿ ಪ್ರಮುಖ ಪಾತ್ರ ವಹಿಸಲಿದೆ ” ಎಂದು ಹೇಳಿದರು.

ಗ್ರಾಮ ಪಂಚಾಯಿತಿಗಳಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳು ಆಗಬೇಕು. ಬಾಲ್ಯವಿವಾಹ ಸಂಪೂರ್ಣ ನಿರ್ಮೂಲನೆ ಸರ್ಕಾರದ, ಅಧಿಕಾರಿಗಳ, ಪೊಲೀಸರ ಜವಾಬ್ದಾರಿ ಮಾತ್ರವಲ್ಲ. ಅದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದ್ದು, ಬಾಲ್ಯವಿವಾಹ ತಡೆಗೆ ಎಲ್ಲರೂ ಪಣತೊಡಬೇಕು. ಜಿಲ್ಲೆಯ ಪ್ರಗತಿಗೆ ಪೂರಕವಾಗಿ ಕೆಲಸ ಮಾಡಿ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತವನ್ನಾಗಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಮಾತನಾಡಿ ” ಸಾಮಾಜಿಕ ಅನಿಷ್ಠ ಪದ್ದತಿಯಾಗಿರುವ ಬಾಲ್ಯ ವಿವಾಹವನ್ನು ಬೇರು ಸಮೇತ ಕಿತ್ತೊಗೆಯಲು ತಳಮಟ್ಟದ ಅಧಿಕಾರಿಗಳಿಂದ ನಿರಂತರ ಪ್ರಯತ್ನಗಳಾಗಬೇಕಿದೆ. ಬಾಲ್ಯ ವಿವಾಹ ತಡೆಗೆ ಚಾಮರಾಜನಗರದಲ್ಲಿ ವಿಶಿಷ್ಟವಾಗಿ ಗಮನ ಸೆಳೆಯುವ ಬೃಹತ್ ವಾಕಥಾನ್ ಆಯೋಜನೆ ದೇಶ, ರಾಜ್ಯದಲ್ಲಿಯೇ ಪ್ರಥಮವಾಗಿದೆ. ಈ ಕಾರ್ಯಕ್ರಮ ಎಲ್ಲ ಜನರನ್ನು ತಲುಪಬೇಕು. ವಿಶೇಷವಾಗಿ ಇಡೀ ದೇಶಕ್ಕೆ ಉತ್ತಮ ಸಂದೇಶ ತಲುಪಬೇಕು. ಆಗಮಾತ್ರ ಇದು ಸಾರ್ಥಕವಾಗಲಿದೆ ” ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಮಾತನಾಡಿ ” ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತಿದೆ. ಖುಷಿಯಿಂದ ಕಳೆಯಬೇಕಾದ ಬಾಲ್ಯವನ್ನು ಮಕ್ಕಳಿಂದ ಬಲವಂತವಾಗಿ ಕಿತ್ತುಕೊಳ್ಳದೇ ಅವರನ್ನು ಮುಂದಿನ ಭವಿಷ್ಯದ ಜೀವನಕ್ಕೆ ಸಿದ್ದಪಡಿಸಬೇಕಾದ ಜವಾಬ್ದಾರಿ ಪೋಷಕರಿಗೆ ಇದೆ. ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಂದ ಅಹವಾಲು ಸ್ವೀಕರಿಸಲು ಆಪ್ತಗೆಳತಿ ದೂರು ಪೆಟ್ಟಿಗೆಗಳನ್ನು ಇಡಲಾಗಿದ್ದು, ಬಾಲ್ಯ ವಿವಾಹ ತಡೆಗೂ ಇದು ನೆರವಾಗಲಿದೆ. ಆಪ್ತಗೆಳತಿ ದೂರು ಪೆಟ್ಟಿಗೆಗಳ ಮೂಲಕ 2024ರ ನವೆಂಬರ್‍ನಿಂದ ಇದುವರೆಗೆ ಸ್ವೀಕರಿಸಲಾದ 315 ದೂರುಗಳನ್ನು ಸೂಕ್ತವಾಗಿ ಇತ್ಯರ್ಥಪಡಿಸಲಾಗಿದೆ ” ಎಂದು ಹೇಳಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಕೊಡಗು | ಬಡವರಿಗೆ ದಕ್ಕಲಿಲ್ಲ ವಸತಿ ಯೋಜನೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಬಾಲ್ಯ ವಿವಾಹ ನಿರ್ಮೂಲನೆಯ ಪ್ರತಿಜ್ಞಾವಿಧಿ ಬೋಧಿಸಿ, ವಾಕಥಾನ್‍ಗೆ ಶುಭ ಹಾರೈಸಿದರು. ಚಾಮರಾಜೇಶ್ವರ ದೇವಾಲಯದಿಂದ ಆರಂಭವಾದ ಬೃಹತ್ ಜನಜಾಗೃತಿ ವಾಕಥಾನ್‍ನಲ್ಲಿ ಎಲ್ಲಾ ಗಣ್ಯರು ಸೇರಿದಂತೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿದರು. ಬಳಿಕ ನಗರದ ಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬಾಲ್ಯ ವಿವಾಹ ನಿರ್ಮೂಲನೆಯ ಘೋಷ ವಾಕ್ಯಗಳನ್ನು ಕೂಗುವುದರ ಮೂಲಕ ಜಾಗೃತಿ ಮೂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...