ಬೆಂಗಳೂರಿನಲ್ಲೊಂದು ವಿಚಿತ್ರ ಘಟನೆ; ಬಂಗಾರದ ಉಂಗುರ ಕದ್ದು ಪರಾರಿಯಾದ ನಕಲಿ ನಾಗಾಸಾಧು

Date:

ನಾಗಾಸಾಧುವಿನ ಸೋಗಿನಲ್ಲಿ ಬಂದ ಖತರ್ನಾಕ್‌ ವ್ಯಕ್ತಿಯೊಬ್ಬ ಕಾರುಚಾಲಕನಿಗೆ ಮಂಕುಬೂದಿ ಎರಚಿ, ಚಿನ್ನದ ಉಂಗುರ ಪೀಕಿ ಪರಾರಿಯಾಗಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ವೈಯಾಲಿ ಕಾವಲ್ ನಿವಾಸಿ ಕಾರು ಚಾಲಕ ವೆಂಕಟಕೃಷ್ಣಯ್ಯ ಎಂಬುವವರು ಇತ್ತೀಚೆಗೆ ರಸ್ತೆ ಬದಿಯಲ್ಲಿ ನಿಂತಿದ್ದಾಗ ನಕಲಿ ನಾಗಾಸಾಧುವೊಬ್ಬ ಬಂದಿದ್ದಾನೆ. ಚಾಲಕನನ್ನು ಕಂಡು 5 ನಿಮಿಷ ವಿಶ್ರಾಂತಿ ಪಡೆದುಕೊಳ್ಳಬೇಕು ಎಂದಿದ್ದಾನೆ. ಬಳಿಕ 5 ರುದ್ರಾಕ್ಷಿ ಕೊಟ್ಟು ಒಂದನ್ನು ವಾಪಸ್ ಕೊಡುವಂತೆ ಹೇಳಿದ್ದಾನೆ. ವಾಪಸ್‌ ಕೊಟ್ಟ ರುದ್ರಾಕ್ಷಿಯನ್ನು ಪೇಪರ್‌ನಲ್ಲಿ ಮಡಚಿ ಮತ್ತೆ ತೆಗೆದಿದ್ದಾನೆ. ಈ ವೇಳೆ ರುದ್ರಾಕ್ಷಿ ಹೂ ಆಗಿ ಬದಲಾಗಿತ್ತು. ನೋಡು ಇದು ಶುಭ ಸೂಚಕ ನಿನಗೆ ಒಳ್ಳೆಯದಾಗುತ್ತೆ ಅಂತ ಕಣ್ಕಟ್ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಳಿಕ ಚಿನ್ನದ ಉಂಗುರ ಬಿಚ್ಚಿ ಕೊಡಲು ಹೇಳಿದ್ದಾನೆ. ಉಂಗುರ ಸಿಕ್ಕಿದ್ದೇ ತಡ ಚಾಲಕನ ಹಣೆಗೆ ಬೂದಿ ಹಚ್ಚಿ ಮಂಕುಬಡಿಸಿದ್ದಾನೆ. ಚಾಲಕ ತಿರುಗಿ ನೋಡುವಷ್ಟರಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಬಳಿಕ ಮನೆಯವರಿಗೆ ವಿಚಾರ ತಿಳಿಸಿದ ವೆಂಕಟಕೃಷ್ಣಯ್ಯ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಡೋಂಗಿ ನಾಗಾಸಾಧುಗಾಗಿ ಹುಡುಕಾಟ ನಡೆಸಿದ್ದಾರೆ.

ಧಾರ್ಮಿಕತೆ ಮತ್ತು ಭಕ್ತಿ ಹೆಸರಿನಲ್ಲಿ ಮೋಸ ಮಾಡುವ ನಕಲಿ ನಾಗಾಸಾಧುಗಳು, ಬಾಬಾಗಳು ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಹೆಚ್ಚಾಗಿದೆ. ಆಶೀರ್ವಾದ ನೀಡುವ ನೆಪದಲ್ಲಿ ಅಥವಾ ಮಂತ್ರದಿಂದ ಸಮಸ್ಯೆ ಪರಿಹಾರ ಮಾಡುತ್ತೇನೆ ಎಂದು ಹೇಳಿಕೊಂಡು ಸುಲಭವಾಗಿ ನಂಬಿಸಿ ಅಮಾಯಕರ ಹಣ, ಚಿನ್ನಾಭರಣ ದೋಚಿ ವಂಚಿಸುತ್ತಿದ್ದಾರೆ. ಯಾವುದೇ ಧಾರ್ಮಿಕ ವ್ಯಕ್ತಿ ಮಾತುಗಳ ಮೂಲಕ ಬೆದರಿಕೆ ಅಥವಾ ಭಯ ಹುಟ್ಟಿಸುವ ಪ್ರಯತ್ನ ಮಾಡಿದರೆ, ಅದನ್ನು ತಕ್ಷಣವಲ್ಲದಿದ್ದರೂ ಶಂಕಿತವಾಗಿ ಪರಿಗಣಿಸಿ, ಅಗತ್ಯವಿದ್ದರೆ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಅವಶ್ಯಕ. ಹಾಗೇ ಬೂದಿ, ರುದ್ರಾಕ್ಷಿಯಂತಹ ವಸ್ತುಗಳನ್ನ ಇಟ್ಟುಕೊಂಡು ಬರುವ ಡೋಂಗಿ ಬಾಬಾಗಳಿಂದ ದೂರವಿರುವುದು ಒಳಿತು.

ಇದನ್ನೂ ಓದಿ: ಬೆಂಗಳೂರು | 400 ಮರಗಳ ಮಾರಣಹೋಮಕ್ಕೆ ರೈಲ್ವೆ ಸಿದ್ಧತೆ; ಪರಿಸರವಾದಿಗಳ ಆಕ್ರೋಶ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...