ಧ್ವಜ ಕಂಬದ ಮೇಲಿಂದ ಬಿದ್ದು ವಿದ್ಯಾರ್ಥಿನೋರ್ವ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲ್ಲೂಕು ಕಳಮಳ್ಳಿ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನ ನಡೆದಿದೆ .
ಪ್ರಕಾಶ್ ಸೋಮನಾಥ ಚವ್ಹಾಣ (9) ಮೂರನೇ ತರಗತಿ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಕಳಮಳ್ಳಿ ತಾಂಡಾದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎನ್ನಲಾಗಿದೆ .
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಶಿಕ್ಷಕರು ಶಾಲೆಯ ಗೇಟ್ ಹಾಕಿ ತೆರಳಿದ್ದರು. ವಿದ್ಯಾರ್ಥಿ ಬಾಲಕರೊಂದಿಗೆ ಕಾಂಪೌಂಡ್ ಹಾರಿ ಆಟವಾಡಲು ಶಾಲೆಯ ಮೈದಾನಕ್ಕೆ ತೆರಳಿದನು.
ಈ ವೇಳೆ ವಿದ್ಯಾರ್ಥಿ ಧ್ವಜ ಕಂಬ ಹತ್ತಿದ ಸಂದರ್ಭದಲ್ಲಿ ಮೇಲಿಂದ ಆಯಾ ತಪ್ಪಿ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿಯ ಪೋಷಕರು ದುಡಿಯುವುದಕ್ಕೆ ವಲಸೆ ಹೋಗಿದ್ದು, ಬಾಲಕ ಅಜ್ಜಿ ಮನೆಯಲ್ಲಿ ವಾಸವಾಗಿದ್ದ.
ತಾವರಗೇರಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದೆ.
