ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಹಳ್ಳಿಗಟ್ಟು ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ (19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪೊನ್ನಂಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ರಾಯಚೂರಿನ ಮಹಾಂತಪ್ಪ ಎಂಬುವರ ಒಬ್ಬಳೇ ಮಗಳಾಗಿದ್ದು, ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾಳೆ. ಎಲ್ಲರೊಟ್ಟಿಗೆ ಸಿಹಿ ಹಂಚಿ ಹುಟ್ಟು ಹಬ್ಬ ಆಚರಿಸಿಕೊಂಡಿರುವ ಮಾಹಿತಿಯನ್ನು ಸ್ನೇಹಿತರು ನೀಡಿದ್ದಾರೆ. ಬಳಿಕ 4-30 ರ ಸುಮಾರಿಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದನ್ನು ಗಮನಿಸಿ, ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ಮಳೆ ಹಾನಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವ ಡಾ. ಹೆಚ್. ಸಿ. ಮಹದೇವಪ್ಪ
ಸ್ಥಳ ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿ ಆರು ಬ್ಯಾಕ್ ಲಾಗ್ ಇರುವ ಕಾರಣ, ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿರುವ ಮಾಹಿತಿ ತಿಳಿದು ಬಂದಿದೆ.