- ಸಾರ್ವಜನಿಕರಿಂದಲೂ ಧರ್ಮದೇಟು – ಯುವಕ ಪೊಲೀಸ್ ವಶಕ್ಕೆ
- ಫೇಸ್‌ಬುಕ್‌ನಲ್ಲಿ ವಿಡಿಯೋ ವೈರಲ್ – ವಿದ್ಯಾರ್ಥಿನಿಗೆ ಮೆಚ್ಚುಗೆ
ಹಾಸನ ಜಿಲ್ಲಾ ಆಸ್ಪತ್ರೆ ಬಳಿ ನಿಂತಿದ್ದ ವಿದ್ಯಾರ್ಥಿನಿಯನ್ನು ಕೆಣಕಿದ ಯುವಕನಿಗೆ ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ.
ಹಾಸನ ಜಿಲ್ಲಾ ಆಸ್ಪತ್ರೆ ಬಳಿಯ ಬಿಎಸ್‌ಎನ್‌ಎಲ್ ಕಚೇರಿ ಬಳಿ ನಿಂತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಯುವಕರಿಬ್ಬರು ಚುಡಾಯಿಸಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿನಿ ಆತನೊಂದಿಗೆ ಜಗಳ ಮಾಡಿ ಸುತ್ತ ಮುತ್ತ ಜನ ಸೇರಿಸಿದ್ದಾಳೆ.
ಇಬ್ಬರು ಯುವಕರಲ್ಲಿ ಒಬ್ಬ ಅಲ್ಲಿಂದ ಪರಾರಿಯಾಗಿದ್ದು, ಮತ್ತೊಬ್ಬನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಈ ವೇಳೆ ಯುವಕನ ಕುತ್ತಿಗೆಪಟ್ಟಿ ಹಿಡಿದ ವಿದ್ಯಾರ್ಥಿ ತನ್ನ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಯುವಕನ ಮುಖಕ್ಕೆ ಬಾರಿಸಿದ್ದಾಳೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಏ. 9ರಂದು ಬಂಡೀಪುರಕ್ಕೆ ಮೋದಿ ಭೇಟಿ ಸಾಧ್ಯತೆ; ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ವಿದ್ಯಾರ್ಥಿನಿಯಿಂದ ಹೇಳಿಕೆ ಪಡೆದಿದ್ದಾರೆ.
ಯುವಕನ ಕತ್ತಿನಪಟ್ಟಿ ಹಿಡಿದು ಚಪ್ಪಲಿಯಿಂದ ಹೊಡೆಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿನಿಯ ಧೈರ್ಯಕ್ಕೆ ಮೆಚ್ಚುಗೆಯ ಮಹಾಪೂರ ವ್ಯಕ್ತವಾಗಿದೆ.