ತುಂಗಾ ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿ ಆಕಾಶ್ (15) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವ. ಶೃಂಗೇರಿ ತಾಲೂಕಿನಲ್ಲಿರುವ ಜೇಸೀಸ್ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ, ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬರ ಮಗ ಆಕಾಶ್, ಭಾನುವಾರ ಶಾಲೆಗಳಿಗೆ ರಜೆ ಇದ್ದ ಕಾರಣ ನಾಲ್ವರು ಸ್ನೇಹಿತರೊಂದಿಗೆ ತುಂಗಾ ನದಿಯಲ್ಲಿ ಈಜಲು ತೆರಳಿದ್ದಾನೆ. ಆದರೆ, ನಾಲ್ವರ ಪೈಕಿ ಓರ್ವ ವಿದ್ಯಾರ್ಥಿ ಆಕಾಶ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬಾಬಾ ಬುಡನ್ ಗಿರಿಗೆ ಕಾಫಿ ಬೆಳೆ ಹೇಗೆ ಬಂತು?
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
