ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕಾಲೇಜೊಂದರ ಬಳಿ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ತಾಂತ್ರಿಕ ದೋಷದಿಂದಾಗಿ ಚಲಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಯಾರಿಗೂ ಏನು ಅಪಾಯ ಸಂಭವಿಸಿಲ್ಲ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ದಳ ಸ್ಟಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.
ಹೊನ್ನಾವರದಿಂದ ಹೊರಟಿದ್ದ ವಾಯವ್ಯ ಕರ್ನಾಟಕ ಸಾರಿಗೆಗೆ ಸೇರಿದ್ದ ಈ ಬಸ್, ಮಾಗುಂಡಿ ಸಮೀಪ ಬರುತ್ತಿರುವಾಗಲೇ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಆದರೂ ಚಾಲಕ ಬಸ್‌ನ್ನು ಚಾಲನೆ ಮಾಡಿಕೊಂಡು ಬಂದಿದ್ದಾನೆ. ಆದರೆ, ಸಾಗರ ನಗರದ ಮುಖ್ಯರಸ್ತೆಯಲ್ಲಿ ಬರುತ್ತಿರುವಾಗ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಬಸ್ ನಿಲ್ಲಿಸಿದ್ದರಿಂದ ಯಾವುದೇ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ ಎಂದು ಕೆಎಸ್ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಹೊನ್ನಾವರ ಮತ್ತು ಸಾಗರದ ಮಧ್ಯೆ ಇರುವ ಊರು ಮಾವಿನಗುಂಡಿ. ಮಾಗುಂಡಿ ಇರುವುದು ಬಾಳೆಹೊನ್ನೂರು ಸಮೀಪದಲ್ಲಿ.