ಕಲಬುರಗಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಬೆಂಬಲಿಗನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಗಿರೀಶ್ ಬಾಬು ಚಕ್ರ (31) ಕೊಲೆಯಾದ ಬಿಜೆಪಿ ಮುಖಂಡ.
ಗಿರೀಶ್ ಬಾಬು ಅವರನ್ನು ಇತೀಚೆಗಷ್ಟೇ ದೂರ ಸಂಪರ್ಕ ಇಲಾಖೆಯ ಕಲಬುರಗಿ ವಿಭಾಗದ ಸಲಹಾ ಸಮಿತಿ ನಾಮ ನಿರ್ದೇಶನ ಮಾಡಲಾಗಿತ್ತು. ಹೀಗಾಗಿ ಪಾರ್ಟಿ ಕೊಡುವುದಾಗಿ ಜಮೀನಿಗೆ ಕರೆಸಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ
ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಗಾಣಗಾಪುರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಪತ್ತೆಗೆ ತಂಡ ರಚಿಸಿದ್ದಾರೆ.