ಬೀದರ್‌ | ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಕಚೇರಿ ಎದುರು ಕಾರಂಜಾ ಸಂತ್ರಸ್ತರಿಂದ ಸಾಂಕೇತಿಕ ಧರಣಿ

Date:

ಕಾರಂಜಾ ಜಲಾಶಯಕ್ಕಾಗಿ ಜಮೀನು ಕಳೆದುಕೊಂಡ ಸಂತ್ರಸ್ತ ರೈತರಿಗೆ ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ 2018 ರಿಂದ ಹೋರಾಟ ನಡೆಸಲಾಗುತ್ತಿದ್ದು, ಕಳೆದ 525 ದಿನಗಳಿಂದ ಬೀದರ್‌ ನಗರದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಂದುವರೆದರೂ ಯಾರೊಬ್ಬರೂ ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಬಗೆಹರಿಸಲು ಮುಂದಾಗುತ್ತಿಲ್ಲ ಎಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆಯವರ ಕಚೇರಿ ಎದುರು ನಡೆಸಿದ ಸಾಂಕೇತಿಕ ಧರಣಿ ಉದ್ದೇಶಿಸಿ ಮಾತನಾಡಿ, “ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾರಂಜಾ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡುವ ಕುರಿತು ಸದನದಲ್ಲಿ ಚರ್ಚಿಸಿ ಸೂಕ್ತ ಪರಿಹಾರಕ್ಕಾಗಿ ಸರ್ಕಾರದ ಮೇಲೆ ಒತ್ತಡ ತರುವಂತೆ ಜಿಲ್ಲೆಯ ಎಲ್ಲ ಶಾಸಕರು, ಸಚಿವರ ಕಚೇರಿಯ ಆವರಣದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

“ಡಿ.2 ರಂದು ಮುಖ್ಯಮಂತ್ರಿಗಳು ಬೀದರ್‌ ಜಿಲ್ಲೆಗೆ ಆಗಮಿಸಿದ ವೇಳೆ ಕಾರಂಜಾ ಸಂತ್ರಸ್ತ ರೈತರ ಬೇಡಿಕೆ ಕುರಿತು ತಿಳಿಸಿದರು. ಕಾರಂಜಾ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸಿದ ಸಿಎಂ, ನಿಯೋಗವನ್ನು ಬೆಂಗಳೂರಿಗೆ ಕರೆಸಿ ಸಮಸ್ಯೆಗಳ ಕುರಿತು ಚರ್ಚಿಸಿ ಬಗೆಹರಿಸಲಾಗುವುದು ಎಂದು ನಿಯೋಗಕ್ಕೆ ಮೌಖಿಕ ಭರವಸೆ ನೀಡಿದ್ದರು. ಅದನ್ನು ಶೀಘ್ರದಲ್ಲಿ ಕಾರ್ಯರೂಪಕ್ಕೆ ತರಬೇಕೆಂದು” ಸಮಿತಿಯ ನಿರ್ದೇಶಕ ವೀರಭ್ರದ್ರಪ್ಪ ಉಪ್ಪಿನ ಸರಕಾರಕ್ಕೆ ಒತ್ತಾಯಿಸಿದರು.

ರೈತ ರಾಜಪ್ಪ ಕಮಾಲಾಪುರೆ ಮಾತನಾಡಿ, “ಕಾರಂಜಾ ಜಲಾಶಯದಲ್ಲಿ ಜಮೀನು ಕಳೆದುಕೊಂಡು ನೂರಾರು  ಹಿರಿಯರು, ವೃದ್ಧರು, ಹಾಗೂ ಮಹಿಳಾ ಸಂತ್ರಸ್ತರು ಒಂದುವರೆ ವರ್ಷದಿಂದ ನಗರದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರಕಾರವಾಗಲಿ, ಜನಪ್ರತಿನಿಧಿಗಳಾಗಲಿ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸ ರೊಟ್ಟಿಯನು ಹೆಂಚಿಗೆ ಹಾಕಿದ ಮಿಜೋ ಮತದಾರರು

ಈ ಸಂದರ್ಭದಲ್ಲಿ ಸಂತಸ್ತ ರೈತರಾದ ಪ್ರಭಾವತಿ, ಕಮಲಾಬಾಯಿ, ವಿದ್ಯಾವತಿ, ಲಕ್ಷ್ಮಿ ಕೌದಿ, ಸಂಗಮ್ಮ, ಚಂಪಾವತಿ, ಚಂದ್ರಮ್ಮ, ಹೇಮಾವತಿ, ರುಕ್ಮಿಣಿ, ಭಾಗಮ್ಮ, ಲಲಿತಾಬಾಯಿ, ರಾಚಮ್ಮ, ತೇಜಮ್ಮ, ಕಾಂತಮ್ಮ, ಶಂಕ್ರಪ್ಪ, ಮಹೇಶ್, ಈಶ್ವರಯ್ಯ ಸ್ವಾಮಿ, ಶಬ್ಬೀರ್ ಮಿಯ, ಪ್ರೇಮದಾಸ, ಯೂಸುಫ್, ರಾಮಕೃಷ್ಣ ಜಮಾದಾರ್, ಮೋಹನರಾವ್ ಬಿರಾದಾರ್, ಮಾದಪ್ಪ ಕೌದಿ, ಲೋಕೇಶ್ ಕನೆರಿ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...