ಕಲಬುರಗಿ | ನಾಳೆ ‘ಬೆಳಕಿನ ಬೇಸಾಯ’ ಕುರಿತು ಸಂವಾದ ಕಾರ್ಯಕ್ರಮ

Date:

ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಯಿಂದ ನಾವು ಅಳವಡಿಸಿಕೊಳ್ಳುವ ಕೃಷಿ ಪದ್ಧತಿ ಹೇಗಿರಬೇಕು ಎನ್ನುವುದರ ಕುರಿತು ʼಬೆಳಕಿನ ಬೇಸಾಯʼ ಕ್ರಮದ ಸಂವಾದ ಕಾರ್ಯಕ್ರಮ ನಾಳೆ ಸಂಜೆ ಕಲಬುರಗಿಯಲ್ಲಿ ಆಯೋಜಿಸಲಾಗಿದೆ.

ಮೈಸೂರು ಭಾಗದ ನೈಸರ್ಗಿಕ ಕೃ‍ಷಿ ತಜ್ಙ, ಲೇಖಕ ಅವಿನಾಶ್ ಟಿ.ಜಿ.ಎಸ್ ಅವರೊಂದಿಗೆ ಮುಕ್ತ ಕೃಷಿ ಪದ್ಧತಿಯ ಬಗ್ಗೆ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವ ಕಾರ್ಯಕ್ರಮವು ಜೂ.15 ರಂದು, ಸಂಜೆ 4 ರಿಂದ 7ರವರೆಗೆ ಕಲಬುರಗಿ ನಗರದ ಕೆಕೆಸಿಸಿ ಚೇಂಬರ್‌ ಆಫ್‌ ಕಾಮರ್ಸ್‌ ಸಭಾಂಗಣದಲ್ಲಿ ನಡೆಯಲಿದೆ.

“ಕಲಬುರಗಿಯ ಬಾಬಾ ಫೌಂಡೇಷನ್‌, ಕೆ.ಕೆ.ಸಿ.ಸಿ. ಹಾಗೂ ಉಳುಮೆ ಪ್ರತಿಷ್ಠಾನ ಮೈಸೂರು ಅವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವೈಜ್ಞಾನಿಕ ಕೃಷಿ ಪದ್ಧತಿಯಲ್ಲಿ ಹೆಚ್ಚಿನ ಆದಾಯ ಪಡೆಯುವ ಮಾದರಿಗಳ ಬಗ್ಗೆ ಚರ್ಚಿಸಲಾಗುವುದು ಹಾಗೂ ರಾಸಾಯನಿಕ ಮುಕ್ತ ಕೃಷಿ ಪದ್ಧತಿಯ ಕುರಿತು ಸಂವಾದ ನಡೆಯಲಿದೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಗತಿಪರ ರೈತರು, ಕೂಲಿ ಕಾರ್ಮಿಕರು, ಪರಿಸರ ಪ್ರೇಮಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಸದುಪಯೋಗಪಡೆದುಕೊಳ್ಳುವಂತೆ ಕೋರಿದ್ದಾರೆ. ಸಂವಾದದಲ್ಲಿ ಭಾಗವಹಿಸಲು ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ರಾಜಶೇಖರ್‌ ಬಸನಾಯಕ್‌ (9711330755) ಅವರನ್ನು ಸಂಪರ್ಕಿಸಲು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ‌ | ಭಾವೈಕ್ಯತೆಯ ಮೊಹರಂ; ಸಾರ್ವಜನಿಕರಿಗೆ ತಿನಿಸು, ಪಾನೀಯ ವಿತರಣೆ

ಹಿಂದೂ-ಮುಸಲ್ಮಾನರು ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಆಚರಿಸುವ ಮೊಹರಂ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ...

‌ಬೆಳಗಾವಿ | ನಮ್ಮ ಧರ್ಮ ನಮ್ಮೊಂದಿಗೆ, ನಮ್ಮ ಪ್ರೀತಿ ಎಲ್ಲರೊಂದಿಗೆ: ಮುಹಮ್ಮದ್ ಕುಂಞಿ

ನಮ್ಮ ಧರ್ಮ ನಮ್ಮೊಂದಿಗೆ ನಮ್ಮ ಪ್ರೀತಿ ಎಲ್ಲರೊಂದಿಗೆ ಇರಲಿ. ನಾವು ನಮ್ಮ...

ಕಲಬುರಗಿ | ಪತ್ನಿ ಕೊಲೆಗೆ ಯತ್ನಿಸಿದ ಪತಿಗೆ 2 ವರ್ಷ ಜೈಲು, ದಂಡ

ಪತ್ನಿಗೆ ಕೌಟುಂಬಿಕ ಹಿಂಸೆ ನೀಡಿ, ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಪತಿಗೆ...

ಉಡುಪಿ | ಅಪಘಾತ ಪ್ರಕರಣಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ: ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ

ಅಪಘಾತ ಪ್ರಕರಣಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದು, ಪ್ರತಿ ಮೂರು ನಿಮಿಷಕ್ಕೆ ಒಬ್ಬರು...