ಸೋಯಾ ರಾಶಿ ಯಂತ್ರಕ್ಕೆ ಸಿಲುಕಿ ರೈತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ
ಅರುಣಾಬಾಯಿ ಬಸಪ್ಪ ರೂಪಾ (50) ಮೃತ ಮಹಿಳೆ ಎಂದು ತಿಳಿದು ಬಂದಿದೆ.
ತಮ್ಮ ಹೊಲದಲ್ಲಿ ಸೋಯಾ ರಾಶಿ ಮಾಡುವಾಗ ಸೀರೆ ಸಿಲುಕಿ ಆಯತಪ್ಪಿ ಯಂತ್ರದೊಳಗೆ ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ತಕ್ಷಣ ಯಂತ್ರ ಬಂದ್ ಮಹಿಳೆಯನ್ನು ಹೊರತೆಗೆಯುವ ವೇಳೆಗೆ ಯಂತ್ರದ ಪಟ್ಟಿ ಕೊರಳಿಗೆ ಸಿಲುಕಿ ಮಹಿಳೆ ಸ್ಥಳದಲ್ಲೇ ಕೊನೆಯುಸಿರೆಳಿದ್ದಾರೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಮೃತರಿಗೆ ಪತಿ, ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಇಬ್ಬರು ಗಂಡು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಔರಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಜರುಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.