ಪತಿಯ ಕಿರುಕುಳ ತಾಳದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಮಹಿಳೆಯೊಬ್ಬರಿಗೆ ಠಾಣೆಯ ಕಾನ್ಸ್‌ಟೇಬಲ್ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪ್ರತಿನಿತ್ಯ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಪತಿ ವಿರುದ್ಧ ದೂರು ಸಲ್ಲಿಸಲು ಕಮಲಾಪುರ ಠಾಣೆಗೆ ಹೋದ ಮಹಿಳೆಗೆ ಪೇದೆ ಬಸವರಾಜ ಎಂಬುವವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಮಹಿಳೆ ಅದೇ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಹಿಳೆ ಗಂಡನ ಜೊತೆ ಗಲಾಟೆ ಕಿರುಕುಳಕ್ಕೆ ಬೇಸತ್ತು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿ ಪೊಲೀಸರ ಅಂಗಲಾಚಿದ್ದಳು. ಮಹಿಳೆಯ ಅಸಹಾಯಕತೆಯನ್ನು ಕಂಡ ಠಾಣೆಯ ಪೇದೆ ಬಸವರಾಜ ಆಕೆಯ ಕಣ್ಣೀರೊರೆಸುವ ನೆಪದಲ್ಲಿ ಮಹಿಳೆಯ ಪರಿಚಯ ಮಾಡಿಕೊಂಡಿದ್ದ. ಅಷ್ಟೇ ಅಲ್ಲದೆ ಪ್ರತಿನಿತ್ಯ ವಾಟ್ಸಾಪ್ ಮೆಸೇಜ್ ಮೂಲಕ ಕಿರುಕುಳ ಕೊಟ್ಟು ಪೀಡಿಸುತ್ತಿದ್ದ ಎನ್ನಲಾಗಿದೆ. ಕಿರುಕುಳ ತಾಳಲಾರದೆ ಕಲಬುರಗಿ ಮಹಿಳಾ ಠಾಣೆಯಲ್ಲಿ ಕಾನ್ಸ್‍ಟೇಬಲ್ ಬಸವರಾಜ ವಿರುದ್ದ ಮಹಿಳೆ ದೂರು ದಾಖಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಶಾಸಕ ಬಸವರಾಜ ಮತ್ತಿಮಡು ಕಾರು ಪಲ್ಟಿ; ಗಾಯ
ಈ ಕುರಿತು ಕಮಲಾಪುರ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ವಿರುದ್ದ ಪ್ರಕರಣ ದಾಖಲಾಗಿದೆ.