ಕಿಟಕಿ ಮೂಲಕ ಬಸ್‌ ಹತ್ತುವಾಗ ತುಂಡಾದ ಮಹಿಳೆ ಕೈ: ವೈರಲ್ ವಿಡಿಯೋಗೆ ಸ್ಪಷ್ಟನೆ ನೀಡಿದ ನಿಗಮ

Date:

  • ಕಿಟಕಿಗಳ ಬಳಿ ಇರುವ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯ
  • ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಕಿಟಕಿ ಮೂಲಕ ಬಸ್‌ ಹತ್ತುವ ವೇಳೆ ಮಹಿಳಾ ಪ್ರಯಾಣಿಕರೊಬ್ಬರ ಕೈ ಮುರಿದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೊವನ್ನು ಅಪ್‌ಲೋಡ್‌ ಮಾಡಲಾಗಿದೆ. ಇದು ತಪ್ಪು ಮಾಹಿತಿಯಾಗಿದ್ದು, ಲಾರಿಯೊಂದು ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯ ಕೈ ತುಂಡಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸ್ಪಷ್ಪನೆ ನೀಡಿದೆ.

- Advertisement -

ರಾಜ್ಯ ಕಾಂಗ್ರೆಸ್‌ ಸರ್ಕಾರ ‘ಶಕ್ತಿ ಯೋಜನೆ’ಯನ್ನು ಜಾರಿಗೊಳಿಸಿದ ಬಳಿಕ, ಮಹಿಳಾ ಪ್ರಯಾಣಿಕರ ವಿರುದ್ಧ ಸಾಕಷ್ಟು ತಿರುಚಿತ ವಿಡಿಯೋಗಳನ್ನು ವಿರೋಧಿಗಳು ಮತ್ತು ಕಿಡಿಗೇಡಿಗಳು ಹಂಚಿಕೊಳ್ಳುತ್ತಿದ್ದಾರೆ. ಅಂತೆಯೇ, ಅಪಘಾತದಿಂದ ಮಹಿಳೆಯ ಕೈ ತುಂಡಾದ ಘಟನೆಯ ವಿಡಿಯೋವನ್ನು, ಆಕೆ ಕಿಟಕಿ ಮೂಲಕ ಬಸ್‌ ಹತ್ತಲು ಹೋಗಿ ಕೈಮುರಿದುಕೊಂಡಿದ್ದಾರೆ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಈ ಬಗ್ಗೆ ಭಾನುವಾರ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿರುವ ನಿಗಮ, “ಜೂನ್ 18ರಂದು ಕೆಎಸ್‌ಆರ್‌ಟಿಸಿ ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ವಾಹನ‌ ಸಂಖ್ಯೆ KA-10-F-151 ನಂಜನಗೂಡಿನಿಂದ ಟಿ.ನರಸೀಪುರಕ್ಕೆ ತೆರಳುತ್ತಿತ್ತು. ಮಧ್ಯಾಹ್ನ ಸುಮಾರು 1.45ಕ್ಕೆ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗವಾಗಿ ಬಂದ ಲಾರಿಯು ಬಸ್‌ನ ಬಲ‌ಹಿಂಬದಿಯ ಕಿಟಕಿಯ ಬಳಿ ಢಿಕ್ಕಿ ಹೊಡೆದಿದೆ” ಎಂದು ಹೇಳಿದೆ.

“ಈ ಅಪಘಾತದಲ್ಲಿ ಕಿಟಕಿಗಳ ಬಳಿಯ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿದ್ದು, ಹೆಚ್.ಡಿ.ಕೋಟೆ ತಾಲೂಕು ಮಾಗುಡಿಲು ನಿವಾಸಿ ಶಾಂತ ಕುಮಾರಿ(33) ಅವರ ಬಲಗೈ ತುಂಡಾಗಿದೆ. ನಂಜನಗೂಡು ತಾಲೂಕು ಹುಲ್ಲಹಳ್ಳಿ ನಿವಾಸಿ ರಾಜಮ್ಮ(50) ಅವರಿಗೆ ಬಲಗೈಗೆ ತೀವ್ರ ಪೆಟ್ಟಾಗಿದೆ. ಈ ಬಗ್ಗೆ ನಿಗಮದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡಿಸಿದ್ದು, ಗಾಯಾಳುಗಳನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸಂಸ್ಥೆಯೂ ಭರಿಸುತ್ತದೆ. ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿಲ್ಲ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ₹100 ಸನಿಹಕ್ಕೆ 1ಕೆಜಿ ಟೊಮೆಟೊ ದರ!

ನಿಗಮವೂ ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...