ಬೈಕ್ ಅಡ್ಡ ಗಟ್ಟಿ ಕಲ್ಲಿನಿಂದ ಜಜ್ಜಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೀದರ್ ತಾಲೂಕಿನ ಅಲಿಯಂಬರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ತಾಲೂಕಿನ ವಿಳಾಸಪುರ ಗ್ರಾಮದ ನಿವಾಸಿ ಅಮೀತ್ ಮಾನಾಜಿ (35) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
ಈ ಹಿಂದೆ ಮೈಸೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿದ ಅಮೀತ್ ಕುಟುಂಬ ತಮ್ಮ ಸ್ವಂತ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದರು.
ಶನಿವಾರ ರಾತ್ರಿ 9:30 ರ ಸುಮಾರಿಗೆ ಬೈಕ್ ಮೇಲೆ ಬರುತ್ತಿದ್ದ ವೇಳೆ ಬೈಕ್ ತಡೆದು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜನವಾಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭೀಕರ ಕೊಲೆಗೆ ಯಾವುದೇ ನಿರ್ದಿಷ್ಟ ಕಾರಣ ಇನ್ನು ತಿಳಿದು ಬಂದಿಲ್ಲ.