ರಾಮನಗರ | ಫೆ.4ರಂದು ‘ಜಿಲ್ಲಾಧಿಕಾರಿ ಹಠಾವೋ, ರೈತ ಬಚಾವೋ’ ಆಂದೋಲನ

Date:

ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿರುವ ರೈತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ರಾಜ್ಯ ಸಂಚಾಲಕ ಕುಮಾರಸ್ವಾಮಿ, ಫೆಬ್ರವರಿ.4ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ‘ಜಿಲ್ಲಾಧಿಕಾರಿ ಹಠಾವೋ, ರೈತ ಬಚಾವೋ’ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

- Advertisement -

ರಾಜ್ಯದಲ್ಲಿ ರೈತರ ಬದುಕು ಅತಂತ್ರವಾಗಿದ್ದು ಸರ್ಕಾರ ವಿರೋಧಿ ನೀತಿಗಳಿಂದ ಸಂಕಷ್ಟಕ್ಕೆ ದೂಡಿದೆ. ಕೊಟ್ಟ ಭರವಸೆ ಈಡೇರಿಸದೆ ಭೂ ಕಬಳಿಕೆ ನಡೆಸುತ್ತಿರುವ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದು ಜಿಲ್ಲಾಧಿಕಾರಿಯವರು ಸೆಕ್ಷನ್ 144 ವಿಧಿಸಿ ಹೋರಾಟ ಹತ್ತಿಕ್ಕುವ ಯತ್ನದಲ್ಲಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಜನಪರ, ರೈತಪರ ಎಂದ ಸರ್ಕಾರ ಬದುಕನ್ನೇ ಅಸ್ಥಿರಗೊಳಿಸುವ ಮಟ್ಟಿಗೆ ಮುಂದಾಗಿದೆ. ಕೊಟ್ಟ ಭರವಸೆಗಳು ಈಡೇರಿಲ್ಲ, ಇದುವರೆಗೆ ರೈತ ವಿರೋಧಿ ಕಾಯ್ದೆ ವಾಪಸ್ ಪಡೆದಿಲ್ಲ, ಕಾರ್ಪೋರೆಟ್ ಕುಳಗಳಿಗೆ ಮಣೆ ಹಾಕಿದೆ. ರೈತರ ಸಂಕಷ್ಟಗಳು ಬಗೆ ಹರಿದಿಲ್ಲ, ವಿನಾಕಾರಣ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ. ಇದರ ಜೊತೆಗೆ ಬೆಲೆ ಏರಿಕೆ ಜನಸಾಮಾನ್ಯರ ಬದುಕನ್ನು ಹಾಳುಗೆಡವಿದೆ. ಬಿಡದಿ ಹೋಬಳಿಯ ಹಲವೆಡೆ ಜಿಲ್ಲಾಧಿಕಾರಿಗಳ ಸಂಬಂಧಿಕರ ಹೆಸರಿನಲ್ಲಿ ಬೇನಾಮಿ ಭೂಮಿ ನೋಂದಣಿಯಾಗಿವೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಉಪಾಧ್ಯಕ್ಷ ಕೆ. ಮಲ್ಲಯ್ಯ ಮಾತನಾಡಿ, ಬಿಡದಿ ಹೋಬಳಿಯ ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಿ ಸುಮಾರು 9600 ಎಕರೆ ಭೂಮಿಯನ್ನು ಎಐಸಿಟಿಗಾಗಿ ಸ್ವಾಧೀನ ಮಾಡಿಕೊಳ್ಳಲು ಮುಂದಾಗಿದೆ. ಈ ಸಂಬಂಧ ಸರ್ಕಾರ, ಜಿಲ್ಲಾಡಳಿತ ಈಗಾಗಲೇ 2600 ಎಕರೆ ಸರ್ಕಾರಿ ಭೂಮಿ ಯೋಜನೆಯ ಉದ್ದೇಶಕ್ಕೆ ಮೀಸಲಿಡಲಾಗಿದೆ ಎಂದು ಹೇಳಿತ್ತು. ಆದರೀಗ, 720 ಎಕರೆ ಮಾತ್ರ ಇದೆ ಎಂದು ಹೇಳುತ್ತಿದೆ. ಸಾರ್ವಜನಿಕವಾಗಿ ಗೊಂದಲ ಮೂಡಿಸಿರುವುದರಿಂದ ಕೂಡಲೇ ಯೋಜನಾ ಪ್ರದೇಶದ ಭೂಮಿ ಮಾಹಿತಿಯನ್ನು ಅಂಕಿ ಅಂಶ ಸಮೇತ ಸ್ಪಷ್ಟಪಡಿಸಬೇಕು ಈ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮ ದಿನೋತ್ಸವ

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ತಿಮ್ಮೆಗೌಡ, ಕಾರ್ಯಧ್ಯಕ್ಷ ಪುಟ್ಟಸ್ವಾಮಿ, ಬೆಂಗಳೂರು ವಿಭಾಗದ ಅಧ್ಯಕ್ಷ ಚಂದ್ರಶೇಖರ್, ಹೋರಾಟಗಾರ ಪ್ರಶಾಂತ್ ಹೊಸದುರ್ಗ, ಜೈ ಭೀಮ್ ಸಂಘಟನೆಯ ಕಿರಣ್ ಸಾಗರ್, ಚೆಲುವರಾಜು, ಭೂ ಹಿತ ರಕ್ಷಣಾ ವೇದಿಕೆ ನಾಗರಾಜ್, ಶಿವು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...