ಖರ್ಗೆ ವಿರುದ್ಧ ನಿಂದನೆ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

Date:

Advertisements

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದುತ್ವವಾದಿ ಕೋಮು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿಯಲ್ಲಿ ದೂರು ದಾಖಲಾಗಿದೆ. ಕಲಬುರಗಿ ಪೊಲೀಸ್‌ ಆಯುಕ್ತ ಆರ್‌ ಚೇತನ್ ಅವರಿಗೆ ಕಲಬುರಗಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವ್ ಗುತ್ತಿದಾರ ದೂರು ಸಲ್ಲಿಸಿದ್ದಾರೆ.

ಇತ್ತೀಚೆಗೆ, ರಾಯಚೂರಿನ ಶಿರವಾದಲ್ಲಿ ‘ನಮೋ ಭಾರತ’ ಹೆಸರಿನಡಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ, “ಕಲಬುರಗಿಯಲ್ಲಿ ಖರ್ಗೆ ಸಾಹೇಬರ ಕಾಲದಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣ‌ ಮಾಡಲಾಗಿದೆ. ಆಸ್ಪತ್ರೆ ಮೇಲ್ಭಾಗವನ್ನು ಡ್ರೋನ್ ಕ್ಯಾಮರಾ ಮೂಲಕ ನೋಡಿದರೆ ಕಟ್ಟಡಗಳ ಆಕಾರದಲ್ಲಿ ‘ಮೊದಲ ಅಕ್ಷರ ಖ, ಎರಡನೇ ಅಕ್ಷರ ಗೆ, ಮೂರನೆಯದು ಅರ್ಕವತ್ತು’ ಕಾಣಿಸುತ್ತದೆ. ಆ ಕಟ್ಟಡ ಖರ್ಗೆ ಅಂತಾ ಇದೆ. ಕಟ್ಟಡ ಇರೋವರೆಗೆ ಅವರ ಹೆಸರು ಉಳಿಯಬೇಕೆಂದು ಹೀಗೆ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಅವರ ಸ್ವಂತ ದುಡ್ಡಿಂದ, ಪಕ್ಷ ದುಡ್ಡಿಂದ ಕಟ್ಟಿಲ್ಲ. ಜನರ ತೆರಿಗೆ ದುಡ್ಡಲ್ಲಿ ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ” ಎಂದಿದ್ದರು.

ಅವರ ಹೇಳಿಕೆಯ ವಿರುದ್ಧ ಜಗದೇವ್ ಗುತ್ತಿದಾರ ದೂರು ಸಲ್ಲಿಸಿದ್ದಾರೆ. ಅಲ್ಲದೆ, ಚಕ್ರವರ್ತಿ ಸೂಲಿಬೆಲೆಯನ್ನು ಗಡಿಪಾರು ಮಾಡಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

Advertisements

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಅಯೋಗ್ಯ ಚಕ್ರವರ್ತಿ ಸೂಲಿಬೆಲೆ ಎನ್ನುವ ಸಮಾಜದ ಕೊಳಕು ಕ್ರಿಮಿಯೊಂದು ಎಐಸಿಸಿ ಅಧ್ಯಕ್ಷ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಬಾಡಿಗೆ ಭಾಷಣ ಮಾಡಿಕೊಂಡು ಬದುಕುವ ಪರಾವಲಂಬಿ ಜೀವಿಗಳಿಗೆ ಶೋಷಿತ ಸಮುದಾಯದ ನಾಯಕರೊಬ್ಬರು ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ. ಸುಳ್ಳುಗಳನ್ನು ಹಬ್ಬಿಸುತ್ತಾ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಇಂತಹ ಕ್ರಿಮಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕೆಂದು ಗೃಹಸಚಿವರಿಗೆ ಮನವಿ ಮಾಡುತ್ತೇವೆ” ಎಂದು ಪೋಸ್ಟ್‌ ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ತಿರುಬೋಕಿ ಬಾಡಿಗೆ ಭಾಷಣಕಾರ,, ತೆರಿಗೆ ದುಡ್ಡಲ್ಲಿ ಸ್ವಂತ ಪ್ರಚಾರಕ್ಕೆ ಸಾವಿರಾರು ಕೋಟಿ, ತನ್ನ ವಿಲಾಸಿ ಓಡಾಟಕ್ಕೆ ಸಾವಿರಾರು ಕೋಟಿ ವಿಮಾನ, ಸುಳ್ಳು ಭಾಷಣಗಳ ಪ್ರಸಾರಕ್ಕೆ ನೂರಾರು ಕೋಟಿ ಇದೆಲ್ಲಾ ಜನಸಾಮಾನ್ಯರ ದುಡ್ಡು,,ಈಗ ಒಂದು ನಿಶ್ಚಿತ ಪಂಥಕ್ಕೆ ಸೇರಿದ ಮಂದಿರಕ್ಕೆ ಸಾವಿರಾರು ಕೋಟಿ ಖರ್ಚು ಮಾಡುತ್ತಿರುವುದು ನೀನು ಮತ್ತು ನಿನ್ನ ಮೆದುಳು ಹಳಸಿದ ಭಕ್ತಮಂಡಿಳಿಯು ಹೊಲ ಗದ್ದೆಗಳಲ್ಲಿ ಕೂಲಿ ಮಾಡಿದ ಹಣವಲ್ಲ,,ಅದೂ ಸಹ ದೇಶದ ಜನಸಾಮಾನ್ಯರ ಹಣವೇ,,, ವರ್ಷವಿಡೀ ನೀನು ನಾಟಕೀಯವಾಗಿ ಜಪ ಮಾಡುವ ನಕಲಿ ರಾಷ್ಟ್ರವಾದಿಗಳ ಗುರು ಮತ್ತು ವರ್ಷವಿಡೀ ಆಪ್ತ ಕಳ್ಳೋದ್ಯಮಿಗಳ ಬೊಕ್ಕಸ ತುಂಬಿಸಲು ಹಗಲಿರುಳು ಶ್ರಮಿಸುವರು,,,ಅವರ ಸರಕಾರಿ ವೆಚ್ಚ ಒಂದ್ಸಾರಿ ಕಣ್ಢಾಡಿಸು,,,

  2. ಶ್ರೀರಾಮನಿಗೆ ಬೇಧಭಾವ ಇಲ್ಲದಿದ್ದರೂ ಕೆಳವರ್ಗದವರನ್ನು ಕಂಡರೆ ಈ ಭಕ್ತರಿಗೆ ಮತ್ಸ ರ ಅಸೂಯೆ ತಪ್ಪಿದ್ದಲ್ಲ ….. ಇದನ್ನು ಸಾಮಾನ್ಯ ಜನರು ಅರ್ಥಮಾಡಬೇಕಿದೆ ….. ಇಂಥವರಿಗೆ ರಾಮನೇ ಒಳ್ಳೆಯ ಬುದ್ಧಿ ಕೊಡಲಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X