ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

Date:

Advertisements

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ವಕೀಲ ಕೆ ಎನ್ ಜಗದೀಶ್ ಅವರಿಗೆ ಬೆಂಗಳೂರಿನ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಈ ಬಗ್ಗೆ ಸ್ವತಃ ತನ್ನ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ವಕೀಲ ಜಗದೀಶ್‌, “ಕೊಡಿಗೇಹಳ್ಳಿ ಪೊಲೀಸರು ನನ್ನ ಮೇಲೆ ಸುಳ್ಳು ದೂರು ದಾಖಲಿಸಿ, ಪೊಲೀಸರು ನನ್ನನ್ನು ವಶಕ್ಕೆ ಪಡೆದಿದ್ದರು. ನನ್ನ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ 7 ವರ್ಷಕ್ಕಿಂತಲೂ ಕಡಿಮೆ ಶಿಕ್ಷೆ ಇದೆ. ಹಾಗಾಗಿ, ನನಗೆ ನ್ಯಾಯಾಲಯವು ನನಗೆ ಜಾಮೀನು ಮಂಜೂರು ಮಾಡಿದೆ” ಎಂದು ತಿಳಿಸಿದ್ದಾರೆ.

ಎರಡು ಭಿನ್ನ ಸಮುದಾಯಗಳ ನಡುವೆ ದ್ವೇಷ ಉಂಟು ಮಾಡಲು ಪ್ರಯತ್ನಿಸಿದ ಆರೋಪದ ಮೇರೆಗೆ ವಕೀಲ ಜಗದೀಶ್ ವಿರುದ್ಧ ಮಂಜುನಾಥ್ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೊಡಿಗೇಹಳ್ಳಿ ಪೊಲೀಸರು ವಕೀಲ ಜಗದೀಶ್ ಅವರನ್ನು ಶುಕ್ರವಾರ ಮನೆಯಿಂದಲೇ ಬಂಧಿಸಿದ್ದರು.

Advertisements

ಇದನ್ನು ಓದಿದ್ದೀರಾ? ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

“ಧರ್ಮಸ್ಥಳ ಹತ್ಯಾಕಾಂಡದ ವಿರುದ್ಧ ಹೋರಾಟ ಮಾಡಿದ ಕಾರಣಕ್ಕೆ ನನ್ನ ಮೇಲೆ ಸುಳ್ಳು ದೂರು ದಾಖಲಿಸಿ, ಪೊಲೀಸರು ನನ್ನನ್ನು ವಶಕ್ಕೆ ಪಡೆದಿದ್ದರು. ಆದರೆ, ನಮ್ಮ ದೇಶದ ಸಂವಿಧಾನ ಇನ್ನೂ ಬದುಕಿದೆ. ನಮ್ಮ ಹೋರಾಟಗಾರರಿಗೆ ಸಂವಿಧಾನವೇ ರಕ್ಷಣೆ. ನ್ಯಾಯಕ್ಕೆ ಜಯ ಇದೆ. ಇಂದು ನನಗೆ ಬೆಲ್ ಸಿಕ್ಕಿದೆ. ನನ್ನ ಹೋರಾಟ ಸತ್ಯದ ಪರ. ನನ್ನ ಹೋರಾಟ ನ್ಯಾಯದ ಪರ. ನನ್ನ ಹೋರಾಟ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಯುತ್ತದೆ. ಸತ್ಯದ ಗೆಲುವು ಖಚಿತ” ಎಂದು ಜಗದೀಶ್ ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ.

“ಉಪಮುಖ್ಯಮಂತ್ರಿಗಳು ನಿನ್ನೆ ತಿಮರೋಡಿಯವರನ್ನು ಬಂಧಿಸಿದ್ದಕ್ಕೆ ಒದ್ದು ಒಳಗೆ ಹಾಕಿದ್ದೇವೆ ಎಂದು ಹೇಳಿಕೆ ನೀಡಿದ್ದರು. ನನ್ನ ಮೇಲೂ ಕೂಡ ಸುಳ್ಳು ಮೊಕದ್ದಮೆ ಹಾಕಿ, ಬಂಧಿಸಿದ್ದರು. ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂಬುದನ್ನು ಅಧಿಕಾರದಲ್ಲಿದ್ದವರು ತಿಳಿದುಕೊಳ್ಳಬೇಕು. ಪೊಲೀಸರಲ್ಲಿ ಕೇಳಿದರೆ, ಮೇಲಿನವರ ಒತ್ತಡ ಎಂದು ತಿಳಿಸುತ್ತಾರೆ. ಸರಿಯಾಗಿ ನೋಟಿಸ್ ನೀಡಿ 24 ಗಂಟೆ ಆಗಿಲ್ಲದಿದ್ದರೂ ಕಾನೂನುಬಾಹಿರವಾಗಿ ಬಂಧಿಸಿದ್ದಾರೆ. ಈ ಎಲ್ಲ ವಿಚಾರವನ್ನು ನಮ್ಮ ವಕೀಲರ ತಂಡ ನ್ಯಾಯಾಲಯದ ಗಮನಕ್ಕೆ ತಂದಿದ್ದರಿಂದ ಜಾಮೀನು ಸಿಕ್ಕಿದೆ. ಜಾಮೀನಿಗೆ ಶ್ರಮಿಸಿದ ವಕೀಲರಿಗೆ ಧನ್ಯವಾದ ಸಲ್ಲಿಸುತ್ತೇನೆ. ಸಮಾಜದಲ್ಲಿ ತಪ್ಪು ನಡೆದಾಗ ಧ್ವನಿ ಎತ್ತುವುದು ನಮ್ಮ ಸಾಂವಿಧಾನಿಕ ಹಕ್ಕು. ನ್ಯಾಯಕ್ಕಾಗಿ ಹೋರಾಡುವುದು ಅಪರಾಧವಲ್ಲ” ಎಂದು ವಕೀಲ ಕೆ ಎನ್‌ ಜಗದೀಶ್‌ ಕಾರಿನಲ್ಲಿ ಕುಳಿತುಕೊಂಡು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ನಾಗಮೋಹನ್‌ ದಾಸ್‌ ಅವರೂ ಕಣ್ಣೀರು ಹಾಕುತ್ತಿದ್ದಾರೆ. ನಾನಂದುಕೊಂಡ ಸಮುದಾಯಕ್ಕೆ ನ್ಯಾಯ ಕೊಡಲು...

ಚಿಕ್ಕಮಗಳೂರು l ಅತ್ತೆಯನ್ನು ಹತ್ಯೆಗೈದ ಸೊಸೆ

ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಸೊಸೆಯೇ ಅತ್ತೆಯನ್ನು ಹತ್ಯೆ ಮಾಡಿರುವ ಘಟನೆ...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X