ಬೀದರ್‌ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಎಬಿವಿಪಿ ಆಗ್ರಹ

Date:

Advertisements

ರಾಜ್ಯದಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ತರಗತಿಗಳು ಸಂಗಮವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕೆಂದು ಎಬಿವಿಪಿ ಆಗ್ರಹಿಸಿದೆ.

ಹುಮನಾಬಾದ್‌ ತಾಲೂಕು ಎಬಿವಿಪಿ ಶಾಖೆಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮುಖಾಂತರ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

“ನ.23 ರಿಂದ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ರಾಜ್ಯದಂತ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದಾಗಿ ಪದವಿ ವಿದ್ಯಾರ್ಥಿಗಳ ತರಗತಿಗಳು ಸರಿಯಾಗಿ ನಡೆಯದ ಕಾರಣ ಶೈಕ್ಷಣಿಕ ಹಿನ್ನಡೆ ಯಾಗುತ್ತಿದ್ದು, ಪರೀಕ್ಷೆ ಹೇಗೆ ಬರೆಯಬೇಕು ಎಂಬ ಆತಂಕ ಕಾಡುತ್ತಿದೆ” ಎಂದು ಹೇಳಿದರು.

Advertisements

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಗೌರವಯುತ ಜೀವನ ಸಾಧ್ಯವಾಗಿಸುವುದು ಸರ್ಕಾರದ ಕರ್ತವ್ಯವಾಗಿವೆ. ರಾಜ್ಯ ಸರ್ಕಾರವು ಈ ವಿಷಯದಲ್ಲಿ ಯಾವುದೇ ರೀತಿಯ ವಿಳಂಬ ಮಾಡದೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡುವುದು ಸೇರಿದಂತೆ ಎಲ್ಲಾ ಬೇಡಿಕೆ ಈಡೇರಿಸಬೇಕೆಂದು ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಒತ್ತಾಯಿಸಿದರು.

ಬೇಡಿಕೆಗಳು :

1.ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡುವುದು.

2.ಸರಕಾರಿ ನೌಕರರಿಗೆ ನೀಡುವ ರೀತಿಯಲ್ಲಿ ಪ್ರತಿ ತಿಂಗಳು ಸಂಬಳ ನೀಡಬೇಕು.

3. ಶಾಶ್ವತ ಪರಿಹಾರವಾಗಿ ರಾಜ್ಯದ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಯನ್ನು ಕೂಡಲೇ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು.

4.ಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿ ಬಹಿಷ್ಕಾರವನ್ನು ಹಿಂಪಡೆದು ಪಾಠ ಪ್ರವಚನಗಳನ್ನು ಆರಂಭಿಸಬೇಕು.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಾಮ ಮಂದಿರ ಕಟ್ಟುವುದರಿಂದ ಉದ್ಯೋಗ, ಶಿಕ್ಷಣ ಸಿಗುತ್ತಾ?: ಮಾವಳ್ಳಿ ಶಂಕರ

ಈ ಸಂದರ್ಭದಲ್ಲಿ ಎಬಿವಿಪಿ ಪ್ರಮುಖರಾದ ಕಾವೇರಿ ಮಠಪತಿ, ಸಿದ್ದು ಕುಂಬಾರ, ಪ್ರವೀಣ ಪಾಂಚಾಳ, ಚನ್ನು ರಾಂಪೂರೆ, ವೀರಶೆಟ್ಟಿ, ವೀಣಾ, ರಾಧಿಕಾ, ಕೌಶಲ್ಯ, ವಿಶ್ವ, ಶೇಖರ್‌ ಸೇರಿದಂತೆ ಇತರರಿದ್ದರು.

ವರದಿ ಮಾಹಿತಿ : ಭೀಮರೆಡ್ಡಿ ಸಿಂಧನಕೇರಾ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X