ಶಿವಮೊಗ್ಗ | ಅಶ್ಲೀಲ ವಿಡಿಯೋ ಹರಿಬಿಟ್ಟ ಪ್ರಕರಣ; ಎಬಿವಿಪಿ ಅಧ್ಯಕ್ಷ ಪ್ರತೀಕ್‌ ಗೌಡ ಬಂಧನ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಯುವತಿಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ತಾಲೂಕು ಘಟಕದ ಅಧ್ಯಕ್ಷ ಪ್ರತೀಕ್ ಗೌಡನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

- Advertisement -

ಎಬಿವಿಪಿ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯ ಅಶ್ಲೀಲ ಚಿತ್ರವನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿರುವ ಆರೋಪಿ. ಈತ, ಎಬಿವಿಪಿಯಲ್ಲಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ, ಯುವತಿಯನ್ನು ತನ್ನ ಕಾಮವಾಂಛೆ ತೀರಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದ. ಅಲ್ಲದೆ, ಆ ಕೃತ್ಯವನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಯುವತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿದ್ದ ಆರೋಪಿ, ಆಕೆಯನ್ನು ನಗ್ನಳಾಗುವಂತೆ ಒತ್ತಾಯಿಸಿದ್ದಾನೆ. ಬಳಿಕ, ಆಕೆಯ ನಗ್ನ ದೃಶ್ಯಗಳನ್ನು ವಿಡಿಯೋ ಮಾಡಿಕೊಂಡಿದ್ದಾನೆ. ಆ ವಿಡಿಯೋ ಇಟ್ಟುಕೊಂಡು ಆಕೆಯನ್ನು ಬ್ಲಾಕ್‌ಮೇಲ್‌ ಮಾಡಲು ಆರಂಭಿಸಿದ್ದಾನೆ. ಅಲ್ಲದೆ, ಜೂನ್ 16ರಂದು ಆ ವಿಡಿಯೋವನ್ನು ವಾಟ್ಸಾಪ್‌ನಲ್ಲಿ ಹರಿಬಿಟ್ಟಿದ್ದಾನೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವಿದ್ಯಾರ್ಥಿನಿಯ ನಗ್ನಚಿತ್ರ ಚಿತ್ರಿಸಿ ಬ್ಲಾಕ್‌ಮೇಲ್; ಎಬಿವಿಪಿ ಅಧ್ಯಕ್ಷನ ಬಂಧನಕ್ಕೆ ಆಗ್ರಹ

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬಳಿಕ, ಆರೋಪಿ ಪ್ರತಿಗೌಡನನ್ನು ಬಂಧಿಸುವಂತೆ ಎನ್‌ಎಸ್‌ಯುಐ ಸಂಘಟನೆ ಒತ್ತಾಯಿಸಿದ್ದು, ಡಿವೈಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಿತ್ತು.

ಈಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...