ಬೀದರ್‌ | ಬಸ್ ಟಿಕೆಟ್‌ ದರ ಹೆಚ್ಚಳ ಖಂಡಿಸಿ ಎಬಿವಿಪಿ ಪ್ರತಿಭಟನೆ

Date:

ರಾಜ್ಯ ಸರ್ಕಾರ ಬಸ್ ಟಿಕೆಟ್ ದರ‌ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಬೀದರ್‌ ನಗರದಲ್ಲಿ ಪ್ರತಿಭಟನೆ ನಡೆಯಿತು.

- Advertisement -

ಬೀದರ್ ನಗರದ ಹೊಸ ಬಸ್ ನಿಲ್ದಾಣದಲ್ಲಿ ಎದುರು ಕೆಲ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ವಿಭಾಗೀಯ ನಿಯಂತ್ರಣಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ʼರಾಜ್ಯದ ಎಲ್ಲ ಸಾರಿಗೆ ಸಂಸ್ಥೆಗಳ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರ ಬಡವರ, ಕೂಲಿ ಕಾರ್ಮಿಕರು, ಮಧ್ಯಮವರ್ಗದ ಜನರಿಗೆ ಬರೆ ಎಳೆದಂತಾಗಿದೆ. ವಿವಿಧ ಕೆಲಸ ಕಾರ್ಯಗಳಿಗೆ ಸಾರಿಗೆ ಸಂಸ್ಥೆಯ ಬಸ್‌ಗಳನ್ನೇ ಅವಲಂಬಿಸಿರುವ ಪ್ರಯಾಣಿಕರಿಗೆ ಸರ್ಕಾರ ಪ್ರಯಾಣ ದರ ದುಬಾರಿಗೊಳಿಸುವುದು ಸರಿಯಾದ ನಿರ್ಧಾರ ಅಲ್ಲ. ಸರ್ಕಾರ ಸಾರಿಗೆ ಸಂಸ್ಥೆಯ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕೇ ಹೊರತು ಪ್ರಯಾಣ ದರ ಹೆಚ್ಚಳವಲ್ಲʼ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ʼರಾಜ್ಯ ಸರ್ಕಾರದ ʼಶಕ್ತಿʼ ಯೋಜನೆಯಿಂದಾಗಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದು ಸರ್ಕಾರದ ಗಮನಕ್ಕಿದೆ. ಸಾರಿಗೆ ಇಲಾಖೆಯ ಬಸ್‌ಗಳ ಸಂಖ್ಯೆ ಹೆಚ್ಚಳ ಮಾಡದೇ ಇರುವ ಕಾರಣಕ್ಕೆ ಗ್ರಾಮೀಣ ಭಾಗದ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಕೂಡಲೇ ಅಧಿಕ ಬಸ್‌ಗಳನ್ನು ಓಡಿಸಿ ವಿದ್ಯಾರ್ಥಿಗಳ, ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿಕೆ ಅಪಾಯಕಾರಿ

ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಸಹ ಕಾರ್ಯದರ್ಶಿ ನಾಗರಾಜ ಸುಲ್ತಾನಪೂರೆ ಹಾಗೂ ಎಬಿವಿಪಿ ಪ್ರಮುಖರಾದ ಪ್ರಾರ್ಥನಾ ಮೆಳಕುಂದೆ, ತಾಲ್ಲೂಕು ಸಂಚಾಲಕ ಮಹೇಶ್, ಪವನ್ ಕುಂಬಾರ್, ಪ್ರಭಾಕರ್, ಅಮರನಾಥ್, ಅತೀಶ್, ಸಾಯಿನಾಥ್, ವಿಶ್ವಾಸ್, ಮಮತಾ, ಕಾವೇರಿ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...