ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಅಂಬೇಡ್ಕರ್ ಮೌಲ್ಯವನ್ನು ಅಕಾಡೆಮಿ ಕಾಪಾಡಬೇಕು: ಕೆ.ವಿ.ಪ್ರಭಾಕರ್

Date:

Advertisements

ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

ಬೆಂಗಳೂರಿನ ಮಲ್ಲೇಶ್ವರಂನ ಜೆ.ಎನ್.ಟಾಟಾ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಕರ್ನಾಟಕ ಮಾಧ್ಯಮ ಅಕಾಡೆಮಿಯ 2023 ಹಾಗೂ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಅವರು ಮಾತನಾಡಿದರು.

ಜನರ, ಸಮಾಜದ ಪ್ರಾಣವಾಯು ಆಗಿರುವ ಪತ್ರಿಕಾ ವೃತ್ತಿಯ ಉಸಿರನ್ನು ಕಾಪಾಡಲು ನಮ್ಮ ಸಂವಿಧಾನ ಇದೆ. ನಮ್ಮ ಸಂವಿಧಾನ ಕತೃ ಆದ ಅಂಬೇಡ್ಕರ್ ಅವರೇ ಹೇಳಿರುವ ರೀತಿ ಪತ್ರಿಕಾ ವೃತ್ತಿ ನಿಜವಾದ ಪ್ರಾಣವಾಯು ಆಗಿ ಉಳಿಯಬೇಕು. ಈ ದಿಕ್ಕಿನಲ್ಲಿ ನಮ್ಮ ಮಾಧ್ಯಮ ಅಕಾಡೆಮಿ ತರಬೇತಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಕರೆ ನೀಡಿದರು.

Advertisements
ಕಕಕ 3

ಅಚ್ಚುಮೊಳೆ ಅವಧಿಯಿಂದ ಕೃತಕ ಬುದ್ದಿಮತ್ತೆವರೆಗೂ ಪತ್ರಿಕಾ ವೃತ್ತಿ ಬೆಳೆದಿದೆ. ತಂತ್ರಜ್ಞಾನದಲ್ಲಿ ನಮ್ಮ ವೃತ್ತಿ ಎಷ್ಟೇ ಮುಂದುವರೆದಿದ್ದರೂ ಸತ್ಯ ಮತ್ತು ನಿಷ್ಠುರ ಮೌಲ್ಯಗಳು ಮಾತ್ರ ಬದಲಾಗಬಾರದು. ಆದರೆ ಇಂದು ಊಹಾ ಪತ್ರಿಕೋದ್ಯಮ, ಕಾಲ್ಪನಿಕ ಪತ್ರಿಕೋದ್ಯಮ ಮತ್ತು ಸುಳ್ಳು ಸುದ್ದಿಗಳ ಹಾವಳಿ ಇಂದು ಹೆಚ್ಚಾಗಿದೆ. ಈ ವಿಚಾರದಲ್ಲಿ ನ್ಯೂಸ್ ರೂಮ್ ಗಳು ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವ ಅಗತ್ಯವಿದೆ ಎಂದರು.

ಇದನ್ನು ಓದಿದ್ದೀರಾ? ಆದ್ಯತೆಯ ಮೇರೆಗೆ ಪತ್ರಕರ್ತರಿಗೆ ನಿವೇಶನ: ಡಿಸಿಎಂ ಡಿ.ಕೆ. ಶಿವಕುಮಾರ್ ಆಶ್ವಾಸನೆ

ಎರಡು ವರ್ಷಗಳಿಂದ ಪ್ರಶಸ್ತಿಗಳನ್ನು ನೀಡಿರಲಿಲ್ಲ. ನಮ್ಮ ಇಲಾಖೆಯ ನಾನಾ ವಿಭಾಗಗಳ ಪ್ರಶಸ್ತಿಗಳು ಐದು ವರ್ಷಗಳಿಂದ ಬಾಕಿ ಇದ್ದವು. ನಮ್ಮ ಅವಧಿಯಲ್ಲಿ ಎಲ್ಲವನ್ನೂ ವಿತರಿಸುವ ಕೆಲಸ ಮಾಡಿದ್ದೇವೆ ಎಂದರು.

ಪತ್ರಕರ್ತ ಕುಟುಂಬಗಳ ಆರೋಗ್ಯ, ಆರೋಗ್ಯ ವಿಮೆ, ಉಚಿತ ಬಸ್ ಪಾಸ್, ನಿವೃತ್ತಿ ವೇತನ ಹೆಚ್ಚಳ ಸೇರಿದಂತೆ ಹತ್ತಾರು ವರ್ಷಗಳಿಂದ ಬಾಕಿ ಇದ್ದ ನಮ್ಮ ಸಮುದಾಯದ ಬೇಡಿಕೆಗಳೆಲ್ಲವನ್ನೂ ಈಡೇರಿಸುತ್ತಿದ್ದೇವೆ ಎಂದು ವಿವರಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X