ಕಲಬುರಗಿ | ಅಡುಗೆ ಸಹಾಯಕರಿಂದ ಲಂಚ ಸ್ವೀಕಾರ; ಹಾಸ್ಟೆಲ್‌ ವಾರ್ಡನ್‌ ಲೋಕಾಯುಕ್ತ ಬಲೆಗೆ

Date:

ವಸತಿ ನಿಲಯದ ಅಡುಗೆ ಸಹಾಯಕರಿಂದ ಲಂಚದ ಹಣ ಪಡೆಯುತ್ತಿದ್ದ‌ ವೇಳೆ ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್ ವಾರ್ಡನ್‍ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

- Advertisement -

ಗುಲಬರ್ಗಾ ವಿಶ್ವವಿದ್ಯಾಲಯದ ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕರ ವಸತಿ ನಿಲಯದ ವಾರ್ಡನ್ ಶಿವಶರಣಪ್ಪ ಅಡುಗೆ ಸಹಾಯಕರ ಹಾಜರಾತಿಗಾಗಿ 15 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ವಸತಿ ನಿಲಯದ ಅಡುಗೆ ಸಹಾಯಕರ ಪ್ರತಿ ತಿಂಗಳು ಹಾಜರಾತಿ ನೀಡಲು 20 ಸಾವಿರ ರೂ. ನೀಡಲು ಲಂಚ ನೀಡುವಂತೆ ಬೇಡಿಕೆ ಮಾಡುತ್ತಿದ್ದರು. ಲಂಚ ನೀಡದಿದ್ದರೆ ಹಾಜರಾತಿ ಮತ್ತು ಸಂಬಳ ನೀಡುವುದಿಲ್ಲ ಎನ್ನುತ್ತಿದ್ದರು. ಇದರಿಂದ ಬೇಸತ್ತು ಅಡುಗೆ ಸಹಾಯಕರೊಬ್ಬರು ಲೋಕಾಯುಕ್ತರಿಗೆ ದೂರು ನೀಡಿದರು.

ಲೋಕಾಯುಕ್ತ ಎಸ್‍ಪಿ ಬಿ.ಕೆ.ಉಮೇಶ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‍ಪಿ ಗೀತಾ ಬೇನಾಳ, ಅಸಿಸ್ಟೆಂಟ್ ಸಬ್ ಇನ್ಸಪೆಕ್ಟರ್ ಬಸವರಾಜ, ಸಿಬ್ಬಂದಿಗಳಾದ ಪ್ರದೀಪ್, ಫೈಮುದ್ದಿನ್, ರೇಣುಕಮ್ಮ, ಪೌಡಪ್ಪ, ಸಂತೋಷಮ್ಮ, ಗುಂಡಪ್ಪ ನೇತ್ರತ್ವದ ತಂಡ ಕಾರ್ಯಚರಣೆ ನಡೆಸಿ ಅಧಿಕಾರಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವರದಿ ಮಾಹಿತಿ : ಮೈಲಾರಿ ದೊಡಮನಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ: ಸಿಪಿಐಎಂ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ವಿಜಯಪುರ | ಸಣ್ಣಪುಟ್ಟ ವಿವಾದಗಳನ್ನು ಸೌಹಾರ್ದದಿಂದ ಬಗೆಹರಿಸಿ: ಎಸ್. ಹಾಗರಗಿ

ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ...

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...