ಫೋನ್ ಪೇ ಮೂಲಕ ₹17 ಸಾವಿರ ಲಂಚ ಪಡೆಯುತ್ತಿದ್ದ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ತಾಲ್ಲೂಕಿನ ಕವಲಗಾ(ಬಿ) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೀತಿರಾಜ್ ಲಂಚ ಪಡೆದ ಆರೋಪಿ. ಪಂಪ್ ಆಪರೇಟರ್ ಗುರುಸಿದ್ದಯ್ಯ ಎಂಬುವವರು ನೀಡಿದ್ದ ದೂರು ಆಧಾರಿಸಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರ ಆರು ತಿಂಗಳ ವೇತನ ಬಾಕಿ ಉಳಿದಿತ್ತು. ಬಾಕಿ ವೇತನ ಮಂಜೂರು ಮಾಡಿ, ಮರು ನೇಮಕ ಮಾಡಿಕೊಳ್ಳಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಫೋನ್ ಪೇ ಮೂಲಕ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ 141 ಕೊಲೆ : ಗೃಹ ಸಚಿವ ಜಿ.ಪರಮೇಶ್ವರ
ಕಲಬುರಗಿ ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಸಿಬ್ಬಂದಿಗಳಾದ ಮಸೂದ್, ಮಲ್ಲಿನಾಥ, ಬಸವರಾಜ್ ಹಾಗೂ ಸಂಯೋಷ ಅವರ ತಂಡ ದಾಳಿ ನಡೆಸಿದೆ.