ಶಿವಮೊಗ್ಗ | ಬಿದರಗೋಡು ಬಳಿ ಪಿಕಪ್-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಮೃತ್ಯು

Date:

ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಅಗಸರಕೋಣೆ ಬಳಿ ನಡೆದಿದೆ.

- Advertisement -

ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ ಸ್ಥಳದಲ್ಲೇ ಬೈಕ್ ನಲ್ಲಿದ್ದ ಒಬ್ಬ ಹಾಗೂ ಪಿಕಪ್ ನಲ್ಲಿದ್ದ ಮತ್ತೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೃತಪಟ್ಟವರು ಅಗಸರಕೋಣೆಯ ಶರತ್ ಹಾಗೂ ಮತ್ತೊಬ್ಬನನ್ನು ಕೇರಳ ಮೂಲದ ಸಂತೋಷ್ ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಪಿಕಪ್ ವಾಹನದ ಚಾಲಕ ಪರಾರಿಯಾಗಿದ್ದಾನೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ವರದಿ: ರಶ್ಮಿ ಶ್ರೀಕಾಂತ್ ನಾಯಕ್, ತೀರ್ಥಹಳ್ಳಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...