ಕಲಬುರಗಿ | ಲಾರಿ, ಟಿಟಿ ಹಾಗೂ ಬೈಕ್‌ ನಡುವೆ ಅಪಘಾತ : ಮೂವರ ಸಾವು

Date:

ಕಲಬುರಗಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ -151ರ ಗೊಬ್ಬೂರ್(ಬಿ) ಗ್ರಾಮದ ಸಮೀಪ ಬುಧವಾರ ಸಂಜೆ ಟಿಟಿ, ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

- Advertisement -

ಕಲಬುರಗಿ ನಿವಾಸಿಗಳಾದ ಅನೂಪ್ , ವಿನಿತಾ ಹಾಗೂ ಗೊಬ್ಬುರ(ಬಿ) ಗ್ರಾಮದ ಬಸವರಾಜ್ ಮೃತರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಲಬುರಗಿಯಿಂದ ಅನೂಪ್‌, ವಿನಿತಾ ಸೇರಿ ಒಟ್ಟು 8 ಜನರು ಟೆಂಪೊ ಟ್ರಾವೆಲ್‌ ವಾಹನದಲ್ಲಿ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದರ್ಶನಕ್ಕೆ ತೆರಳಿದ್ದರು. ದರ್ಶನ ಮುಗಿಸಿಕೊಂಡು ಸಂಜೆ ವಾಪಸ್‌ ಬರುವಾಗ ಗೊಬ್ಬರು(ಬಿ) ಗ್ರಾಮ ಸಮೀಪ ಟಿಟಿ ಚಾಲಕ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕಬ್ಬಿನ ಲಾರಿಗೆ ಡಿಕ್ಕಿ ಹೊಡೆದರು. ಇದೇ ವೇಳೆ ದ್ವಿಚಕ್ರ ವಾಹನ ಸವಾರನೂ ಸಿಲುಕಿಕೊಂಡು ಸಾವನಪ್ಪಿದ್ದಾರೆ.

ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಟಿಟಿ ವಾಹನದಲ್ಲಿದ್ದ ವಿನಿತಾ, ಅನುಪ್‌ ಹಾಗೂ ದ್ವಿಚಕ್ರ ಸವಾರ ಕೊನೆಯುರೆಳೆದಿದ್ದಾರೆ. ಟಿಟಿಯಲ್ಲಿದ್ದ ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟ ದಿನ

ವಿಷಯ ತಿಳಿದು ಘಟನಾ ಸ್ಥಳಕ್ಕೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ನೇತ್ರತ್ವದ ತಂಡ ದೌಡಾಯಿಸಿ ಪರಿಶೀಲನೆ ನಡೆಸಿದರು. ಈ ಬಗ್ಗೆ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...