ಆಕಸ್ಮಿಕವಾಗಿ ತೋಟದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಯಲಗೋಡ ಗ್ರಾಮದಲ್ಲಿ ನಡೆದಿದೆ.
ಮೊಸಿನಪಟೇಲ ಹುಸೇನಪಟೇಲ ಕಣಮೇಶ್ವರ ಎಂಬುವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, 150ಕ್ಕೂ ಹೆಚ್ಚು ಹತ್ತಿ ಚೀಲಗಳು ಸುಟ್ಟು ಭಸ್ಮವಾಗಿವೆ. ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಆ್ಯಪ್ ಆಧಾರಿತ ಸಮೀಕ್ಷೆ ಕೈಬಿಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ