ಕೋಲಾರ | ಡಿಸಿ ಅಕ್ರಂ ಪಾಷ ವಿರುದ್ಧ ಡಿಎಂಎಫ್‌ಟಿ ಹಣ ದುರ್ಬಳಕೆ ಆರೋಪ; ಸಮಗ್ರ ತನಿಖೆಗೆ ಡಾ.ಮಂಜುನಾಥ್ ಆಗ್ರಹ

Date:

Advertisements

2015-16ರಿಂದ 2022-23ನೇ ಸಾಲಿನವರೆಗೆ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗಾಗಿ ಸಂಗ್ರಹಿಸಲಾಗಿರುವ ಒಟ್ಟು 14.55 ಕೋಟಿ ಹಣವನ್ನು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಮನಸೋ ಇಚ್ಛೆ ಖರ್ಚು ಮಾಡಿದ್ದಾರೆ. ಡಿಎಂಎಫ್‌ಟಿ ಹಣವನ್ನು ಬೇರೆ ಬೇರೆ ಕಾಮಗಾರಿಗಳಿಗೆ ಬಳಕೆ ಮಾಡಲಾಗಿದ್ದು, ಒಂದೇ ಕಾಮಗಾರಿಗೆ ಎರಡೆರಡು ಬಾರಿ ಬಿಲ್‌ ಮಾಡಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಡಾ.ಮಂಜುನಾಥ್‌ ಆರ್.‌ ಹುಣಸೀಕೋಟೆ ಆರೋಪಿಸಿದರು.

ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ 26 ಗ್ರಾಮಗಳು, ಕೋಲಾರ ತಾಲ್ಲೂಕಿನ 14 ಗ್ರಾಮಗಳು, ಮುಳಬಾಗಿಲು ತಾಲೂಕಿನ 9 ಗ್ರಾಮಗಳು ಮತ್ತು ಶ್ರೀನಿವಾಸಪುರದ 1 ಹಳ್ಳಿ ಸೇರಿದಂತೆ ಒಟ್ಟು 50 ಹಳ್ಳಿಗಳನ್ನು ಗಣಿಬಾಧಿತ ಪ್ರದೇಶಗಳೆಂದು ಗುರುತಿಸಲಾಗಿದ್ದು, ಅವುಗಳ ಅಭಿವೃದ್ಧಿಗಾಗಿ 2015-16 ರಿಂದ 2022-23ನೇ ಸಾಲಿನವರೆಗೆ ಒಟ್ಟು 14.55 ಕೋಟಿ ಹಣ ಸಂಗ್ರಹಿಸಲಾಗಿದೆ. ಸದರಿ ಡಿಎಂಎಫ್‌ಟಿ ಹಣವನ್ನು ನೇರವಾಗಿ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಬಳಸಬೇಕಿದ್ದು, ಈ ಹಣವನ್ನು ಜಿಲ್ಲಾಧಿಕಾರಿಗಳು ವಿವಿಧ ಕಾಮಗಾರಿಗಳ ಹೆಸರಲ್ಲಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆಪಾದಿಸಿದರು.

ಡಾ ಮಂಜುನಾಥ್‌ ಕೋಲಾರ 1

ಗಣಿಭಾದಿತ ಪ್ರದೇಶಗಳನ್ನು ಹೊರತುಪಡಿಸಿ ಮುಂದುವರಿದ ಬಡಾವಣೆಗಳ ರಸ್ತೆಗಳು ಮತ್ತು ವಿವಿಧ ಕಾಮಗಾರಿಗಳಿಗೆ ಡಿಎಂಎಫ್‌ಟಿ ಹಣ ಬಳಸಿದ್ದಾರೆ. ಜೊತೆಗೆ ತಾವೇ ಅಧ್ಯಕ್ಷರಾಗಿರುವ ನಿರ್ಮಿತಿ ಕೇಂದ್ರಕ್ಕೆ ವಿವಿಧ ಕಾಮಗಾರಿಗಳ ಹೆಸರಲ್ಲಿ ಒಟ್ಟು 7 ಕೋಟಿ 74.5 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಡಿ.ಎಂ.ಎಫ್.ಟಿ ಹಣವನ್ನು ದುರುಪಯೋಗಪಡಿಸಿಕೊಳ್ಳುವ ಉದ್ದೇಶದಿಂದಲೇ ಈ ಕಾಮಗಾರಿಗಳಿಗೆ ಅನುಮೋದನೆ ಕೊಡಿಸಿದ್ದಾರೆ. ಈ ಎಲ್ಲಾ ಕಾಮಗಾರಿಗಳ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

Advertisements

ಸಾಮಾಜಿಕ ಹೋರಾಟಗಾರ ಹಾಗೂ ಗುತ್ತಿಗೆದಾರ ಡಿ.ಮೌನೇಶ್‌ ಮಾತನಾಡಿ, ಜಿಲ್ಲಾ ಪೋಲಿಸ್ ಕಛೇರಿಯ ಶೌಚಾಲಯ, ಸಭಾಂಗಣ ಕೊಠಡಿ, ಇತರೆ ದುರಸ್ತಿ ಕಾಮಗಾರಿಗಳಿಗೆ ಒಟ್ಟು 39 ಲಕ್ಷದ 50 ಸಾವಿರ ರೂ. ಮಂಜೂರಾಗಿದ್ದು(2024-25 ನೇ ಸಾಲಿನ ಲೆಕ್ಕ ಶೀರ್ಷಿಕೆ 2055-00-113-0-04-200), ಆದರೆ ಇದೇ ಕಾಮಗಾರಿಗೆ ಡಿ.ಎಂ.ಎಫ್.ಟಿ ಅನುದಾನದಲ್ಲಿ 25 ಲಕ್ಷ ರೂ. ಹಣವನ್ನು ಜಿಲ್ಲಾಧಿಕಾರಿ ಅಕ್ರಂ ಪಾಷ ಮಂಜೂರು ಮಾಡಿದ್ದಾರೆ. ಕೋಲಾರ ಜಿಲ್ಲಾ ಕಛೇರಿಗಳ ಸಂಕೀರ್ಣ ಕಟ್ಟಡದ ಒಳಾಂಗಣ ವಿನ್ಯಾಸ ಕಾಮಗಾರಿಗಳಿಗೆ ಒಟ್ಟು 5 ಕೋಟಿ 91 ಲಕ್ಷ ರೂ. ಮಂಜೂರಾಗಿದೆ(ಸರ್ಕಾರದ ಆದೇಶ ಸಂಖ್ಯೆ ಕಂಇ03 ಡಬ್ಲ್ಯೂ ಬಿಆರ್2023(2) ಬೆಂಗಳೂರು ದಿ:15/11/2023). ಆದರೆ ಜಿಲ್ಲಾಧಿಕಾರಿಗಳು ಡಿ.ಎಂ.ಎಫ್‌.ಟಿ ಹಣದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮತ್ತು ಉಪವಿಭಾಗಾಧಿಕಾರಿಗಳ ಕಛೇರಿ ಮತ್ತು 6 ತಾಲ್ಲೂಕು ಕಛೇರಿಗಳ ದುರಸ್ತಿ ಮತ್ತು ಪೀಠೋಪಕರಣಗಳಿಗಾಗಿ ಒಟ್ಟು 1 ಕೋಟಿ 65 ಲಕ್ಷ ರೂಪಾಯಿಗಳನ್ನು ಮೀಸಲಿಟ್ಟಿದ್ದಾರೆ. ಒಂದೇ ಕಾಮಗಾರಿ, ಆದರೆ ಎರಡು ಬಾರಿ ಬಿಲ್ಲುಗಳನ್ನು ಮಾಡಿದ್ದಾರೆ ಎಂದು ದೂರಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಸಿ ಟಿ ರವಿಯಂಥವರಿಗೆ ಮಹಿಳೆಯರನ್ನು ಅಪಮಾನಿಸೋದು ಮನುವಾದಿ ವ್ಯಸನ

ಸರ್ಕಾರಿ ಪದವಿ ಕಾಲೇಜು (ಬಾಲಕರ) ದುರಸ್ತಿಗೆ 60 ಲಕ್ಷ ಹಣವನ್ನು ಡಿ.ಎಂ.ಎಫ್.ಟಿ ಹಣದಲ್ಲಿ ಬಿಡುಗಡೆ ಮಾಡಲಾಗಿದ್ದು, ವಾಸ್ತವವಾಗಿ ಚುನಾವಣೆ ಸಮಯದಲ್ಲಿ ‌ಚುನಾವಣೆ ಹಣದಲ್ಲಿ ಕಾಲೇಜಿಗೆ ಸುಣ್ಣಬಣ್ಣ, ಸಣ್ಣಪುಟ್ಟ ದುರಸ್ತಿ ಕೆಲಸಗಳನ್ನು ಮಾಡಿರುತ್ತಾರೆ. ಜೊತೆಗೆ ಗೋಡೆ ಕಾಮಗಾರಿಯು ನಿಕಟಪೂರ್ವ ಪೋಲಿಸ್ ವರಿಷ್ಠಾಧಿಕಾರಿಗಳು ದಾನಿಗಳ (ಸಿ.ಎಸ್.ಆರ್ ಅನುದಾನ) ಹಣದಲ್ಲಿ ಕಾಮಗಾರಿ ಮಾಡಿಸಿರುತ್ತಾರೆ.‌ ಇದೇ ರೀತಿ ಮಾನ್ಯ ಜಿಲ್ಲಾಧಿಕಾರಿಗಳ ಕಛೇರಿಯ ವಿವಿಧ ಇಲಾಖೆಗಳಲ್ಲಿ ಹಲವಾರು ಕಾಮಗಾರಿಗಳನ್ನು ಮಾಡಿರುವ ಹಾಗೆ ಬಿಲ್ಲುಗಳನ್ನು ಮಾಡಿಕೊಂಡಿದ್ದಾರೆ. ಆದ್ದರಿಂದ ಸರಕಾರ ಕೂಡಲೇ ಸದರಿ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರ ಅವಧಿಯಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳ ತನಿಖೆಗೆ ಆದೇಶಿಸಬೇಕು ಎಂದು ಸರಕಾರಕ್ಕೆ ಆಗ್ರಹಿಸಿದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X