ಉಡುಪಿ | ಫ್ಲಾಟ್‌ ನೀಡುವುದಾಗಿ ಹಣ ಪಡೆದು ವಂಚನೆ; ನಿವಾಸಿಗಳ ಆರೋಪ

Date:

ಉಡುಪಿ ನಗರದ ಅಜ್ಜರಕಾಡು ವಾರ್ಡಿನ ಕಾಡಬೆಟ್ಟು ಎಂಬಲ್ಲಿರುವ ಶ್ರೀಲಕ್ಷ್ಮಿ ಇನ್ಫಾಸ್ಟಕ್ಚರ್‌ನ ಮಾಲೀಕ ಅಮೃತ್ ಶೆಣೈ ನಿರ್ಮಿಸಿರುವ ಒಂಬತ್ತು ಮಹಡಿಯ ವೈಜರ್ ವಸತಿ ಸಮುಚ್ಚಯದಲ್ಲಿ ಫ್ಲಾಟ್‌ ಕೊಡುವುದಾಗಿ ಹಣ ಪಡೆದು ವಂಚಿಸಲಾಗಿದೆ ಎಂದು ಫ್ಲಾಟ್‌ ನಿವಾಸಿಗಳು ಆರೋಪಿಸಿದ್ದಾರೆ.

- Advertisement -

ಭಾನುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ವಸತಿ ಸಮುಚ್ಚಯದ ನಿವಾಸಿ ಮತ್ತು ವಕೀಲ ಗಿರೀಶ್ ಐತಾಳ್ ಮಾತನಾಡಿ, “ಫ್ಲಾಟ್‌ ನಿರ್ಮಾಣ ಕಾಮಗಾರಿ 2014ರಿಂದ ಆರಂಭಿಸಲಾಗಿದೆ. ಇದರಲ್ಲಿ ಫ್ಲಾಟ್‌ ಕೊಡುವುದಾಗಿ ನಂಬಿಸಿ ಒಂದೇ ಫ್ಲಾಟ್‌ಗೆ ಒಂದಕ್ಕಿಂತ ಹೆಚ್ಚು ಮಂದಿಯಿಂದ ಹಣ ಪಡೆದು, ಯಾರಿಗೂ ಈವರೆಗೆ ನೋಂದಾಣಿ ಮಾಡಿ ಕೊಟ್ಟಿಲ್ಲ. ಅಲ್ಲದೆ ವಸತಿ ಸಮುಚ್ಚಯಕ್ಕೆ ಮಾಡಿರುವ ಸಾಲವನ್ನು ಮರು ಪಾವತಿಸದೆ 36 ಕುಟುಂಬಗಳನ್ನು ಬೀದಿ ಪಾಲು ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ವಸತಿ ಸಮುಚ್ಚಯದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಆದರೂ ಇಲ್ಲಿರುವ 36 ಫ್ಲಾಟ್‌ಗಳ ಪೈಕಿ 30 ಫ್ಲಾಟ್‌ಗಳಲ್ಲಿ ಸುಮಾರು 150 ಮಂದಿ ವಾಸ ಮಾಡಿಕೊಂಡಿದ್ದಾರೆ. ಒಂದು ಫ್ಲಾಟ್‌ಗೆ ಎರಡು ಮೂರು ಮಂದಿಯಿಂದಲೂ ಹಣ ಪಡೆದಿರುವುದರಿಂದ ಅವರು ಬಂದು ವಾಸ ಮಾಡಬಹುದು ಎಂಬ ಭೀತಿಯಲ್ಲಿ ಇವರೆಲ್ಲ ಬಂದು ಕುಳಿತಿದ್ದಾರೆ. ಇವರು ವಿದ್ಯುತ್, ನೀರು ಸೇರಿದಂತೆ ಯಾವುದೇ ಮೂಲ ಸೌಕರ್ಯ ಇಲ್ಲದೆ ಬದುಕು ನಡೆಸುತ್ತಿದ್ದಾರೆ” ಎಂದರು.

“ಒಂದೇ ಫ್ಲಾಟ್‌ಗೆ ಒಂದೇ ಬ್ಯಾಂಕಿನಲ್ಲಿ ಬೇರೆ ಬೇರೆಯವರ ಹೆಸರಿನಲ್ಲಿ ಸಾಲ ಕೂಡ ಮಂಜೂರಾಗಿದೆ. ಈ ಬಗ್ಗೆ ಕೆನರಾ ಬ್ಯಾಂಕಿನ ಉಪಮಹಾಪ್ರಬಂಧಕರಿಗೂ ದೂರು ನೀಡಲಾಗಿದೆ. ಹೀಗೆ ಹಣ ಕೊಟ್ಟು ಫ್ಲಾಟ್‌ ಸಿಗದವರು 10ಕ್ಕೂ ಅಧಿಕ ಮಂದಿ ಇದ್ದಾರೆ. ವಸತಿ ಸಮುಚ್ಚಯದ ಕಾಮಗಾರಿ ಇನ್ನು ಶೇ. 40ರಷ್ಟು ಬಾಕಿ ಇದೆ. ಆರು ಫ್ಲಾಟ್‌ಗಳ ಕಾಮಗಾರಿ ಇನ್ನೂ ನಡೆದಿಲ್ಲ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಅಕ್ಕಿ ಕೊಡಲು ನಿರಾಕರಿಸಿದ ಬಗ್ಗೆ ‘ಮನ್‌ ಕಿ ಬಾತ್‌’ನಲ್ಲಿ ಮಾತಾಡುವಿರಾ; ದಿನೇಶ್‌ ಗುಂಡೂರಾವ್ ಪ್ರಶ್ನೆ

“ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಈ ನಿಟ್ಟಿನಲ್ಲಿ ಜೂ. 19ರಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು. ಕಾನೂನು ಹೋರಾಟಕ್ಕಾಗಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗುವುದು. ಇವರಿಂದ ಇನ್ನು ಯಾರೂ ಮೋಸ ಹೋಗಬಾರದು ಮತ್ತು ನಮಗೆ ನ್ಯಾಯ ಸಿಗಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ವಸತಿ ಸಮುಚ್ಚಯದ ನಿವಾಸಿಗಳಾದ ಅಬ್ದುಲ್ ರಝಾಕ್, ಪಾಂಡುರಂಗ ರಾವ್, ಜೆಸಿಂತಾ ಮೆಂಡೋನ್ಸಾ, ಜೋಷಿತಾ ಮಥಾಯಸ್ ಮೊದಲಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...