ಕೌಟುಂಬಿಕ ಕಲಹದಿಂದ ಕುಡಿದ ನಶೆಯಲ್ಲಿ ಹೆಂಡತಿ ಹಾಗೂ ಅಜ್ಜಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ.
ದ್ಯಾಮವ್ವ (66) ಹಾಗೂ ಜ್ಯೋತಿ (23) ಕೊಲೆಯಾದವರು. ದುರ್ಗಪ್ಪ ಇಬ್ಬರನ್ನೂ ಹತ್ಯೆಗೈದ ಆರೋಪಿ ಎನ್ನಲಾಗಿದೆ.
ಮುದಗಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲೊ ಡಿ ಗ್ರೂಪ್ ನೌಕರನಾದ ದುರ್ಗಪ್ಪ ತನ್ನ ಕುಟುಂಬದೊಂದಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದ. ಪ್ರತಿನಿತ್ಯ ಮನೆಯಲ್ಲಿ ಕಲಹ ನಡೆಯುತ್ತಿತ್ತು. ದುರ್ಗಪ್ಪ ಮದ್ಯ ಸೇವಿಸಿ ಬಂದು ತಾಯಿ ಹಾಗೂ ಹೆಂಡತಿಗೆ ಮನಸೋ ಇಚ್ಚೆ ಥಳಿಸುತ್ತಿದ್ದ, ನಿನ್ನೆ ತಡರಾತ್ರಿ ಕಂಠಪೂರ್ತಿ ಕುಡಿದು ಜಗಳ ಮಾಡಿ ಕೊಡಲಿಯಿಂದ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ.
ʼಹತ್ಯೆಗೈದ ಬಳಿಕ ದುರ್ಗಪ್ಪ ಸ್ಥಳದಿಂದ ಪರಾರಿಯಾಗಿದ್ದ. ನಮ್ಮ ಪೊಲೀಸರ ತಂಡ ಶೋಧ ಕಾರ್ಯ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆʼ ಎಂದು ಈದಿನ.ಕಾಮ್ ದೊಂದಿಗೆ ಮತನಾಡಿ ಪಿಎಸ್‌ಐ ವೆಂಕಟೇಶ ತಿಳಿಸಿದ್ದಾರೆ.