ರಾಯಚೂರು | ಹೆಂಡತಿ, ಅಜ್ಜಿಯನ್ನು ಬರ್ಬರವಾಗಿ ಹತ್ಯೆಗೈದ ಆರೋಪಿ ಬಂಧನ

Date:

ಕೌಟುಂಬಿಕ ಕಲಹದಿಂದ ಕುಡಿದ ನಶೆಯಲ್ಲಿ ಹೆಂಡತಿ ಹಾಗೂ ಅಜ್ಜಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ.

- Advertisement -

ದ್ಯಾಮವ್ವ (66) ಹಾಗೂ ಜ್ಯೋತಿ (23) ಕೊಲೆಯಾದವರು. ದುರ್ಗಪ್ಪ ಇಬ್ಬರನ್ನೂ ಹತ್ಯೆಗೈದ ಆರೋಪಿ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮುದಗಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲೊ ಡಿ ಗ್ರೂಪ್ ನೌಕರನಾದ ದುರ್ಗಪ್ಪ ತನ್ನ ಕುಟುಂಬದೊಂದಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದ. ಪ್ರತಿನಿತ್ಯ ಮನೆಯಲ್ಲಿ ಕಲಹ ನಡೆಯುತ್ತಿತ್ತು. ದುರ್ಗಪ್ಪ ಮದ್ಯ ಸೇವಿಸಿ ಬಂದು ತಾಯಿ ಹಾಗೂ ಹೆಂಡತಿಗೆ ಮನಸೋ ಇಚ್ಚೆ ಥಳಿಸುತ್ತಿದ್ದ, ನಿನ್ನೆ ತಡರಾತ್ರಿ ಕಂಠಪೂರ್ತಿ ಕುಡಿದು ಜಗಳ ಮಾಡಿ ಕೊಡಲಿಯಿಂದ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ.

ʼಹತ್ಯೆಗೈದ ಬಳಿಕ ದುರ್ಗಪ್ಪ ಸ್ಥಳದಿಂದ ಪರಾರಿಯಾಗಿದ್ದ. ನಮ್ಮ ಪೊಲೀಸರ ತಂಡ ಶೋಧ ಕಾರ್ಯ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆʼ ಎಂದು ಈದಿನ.ಕಾಮ್‌ ದೊಂದಿಗೆ ಮತನಾಡಿ ಪಿಎಸ್‌ಐ ವೆಂಕಟೇಶ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...