ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಸಾಧನೆ: 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಕೌಶಲ್ಯ ಶೃಂಗಸಭೆ-2025 ಪ್ರಶಸ್ತಿ

Date:

ರಾಷ್ಟ್ರೀಯ ಜೀವನೋಪಾಯ ಅಭಿಯಾನ (NRLM & NULM) ಅಡಿಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ನೀಡಿ ಬೆಂಗಳೂರು ಕೌಶಲ್ಯ ಶೃಂಗಸಭೆ-2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.

- Advertisement -

ಬೆಂಗಳೂರಿನ ಲಲಿತ ಅಶೋಕ ಹೊಟೇಲ್‌ನಲ್ಲಿ ಆಯೋಜಿಸಲಾಗಿದ್ದ ಮೂರು‌ ದಿನಗಳ ಬೆಂಗಳೂರು ಕೌಶಲ್ಯ ಶೃಂಗಸಭೆ-2025ಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣ ಪ್ರಕಾಶ್ ಆರ್ ಪಾಟೀಲ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿರುವ ವಿವಿಧ ಅಂಗ ಸಂಸ್ಥೆಗಳಿಗೆ ನೀಡುವ ಕೌಶಲ್ಯ ಶೃಂಗ ಸಭೆ 2025ರ ಪ್ರಶಸ್ತಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಾವಿಕೆರೆ ಗ್ರಾಮ ಪಂಚಾಯತಿಯ ಸ್ಫೂರ್ತಿ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಹಿರಿಹೊನ್ನಪ್ಪ ವಿಕಾಸ ಮಹಿಳಾ ಸ್ವ ಸಹಾಯ ಸಂಘ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗೋಳ್ತಮಜಲಿನ ಆಶೀರ್ವಾದ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಶ್ರೀ ಸಿದ್ದಿವಿನಾಯಕ ಮಹಿಳಾ ಸ್ವ-ಸಹಾಯ ಸಂಘ, ಕಲಬುರಗಿಯ ಅಳಂದ ತಾಲೂಕಿನ ಗುಂಜ ಬಬಲಾದ ಗ್ರಾ ಪಂಚಾಯತಿ ಗಂಗಾ ಪರಮೇಶ್ವರಿ ಒಕ್ಕೂಟದ ಚೆನ್ನಮ್ಮ ಸ್ವ ಸಹಾಯ ಸಂಘ, ಚಿತ್ರದುರ್ಗ ಜಿಲ್ಲೆಯ ಹಿರಯೂರು ತಾಲೂಕಿನ ವಿವಿಪುರ ಗ್ರಾಮ ಪಂಚಾಯತಿಯ‌ ಝಾನ್ಸಿ‌ರಾಣಿ‌ ಮಹಿಳಾ ಒಕ್ಕೂಟದ ಶ್ರೀರಾಮ ಆತ್ಮ ಮಹಿಳಾ ಆಹಾರ‌ ಭದ್ರತಾ ಗುಂಪು, ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಡವಿ ಗ್ರಾಮ ಪಂಚಾಯತಿಯ ಶ್ರೀ ರಾಮಲಿಂಗೇಶ್ವರಿ ಸಂಜೀವಿನಿ‌ ಮಹಿಳಾ ಒಕ್ಕೂಟದ ತಾಯಮ್ಮದೇವಿ ಸ್ವ-ಸಹಾಯ ಗುಂಪು, ಶಿವಮೊಗ್ಗ ಜಿಲ್ಲೆಯ ಮಹಾನಗರ ಪಾಲಿಕೆಯ ಶ್ರೀದುರ್ಗಾ ಪ್ರದೇಶ ಮಟ್ಟದ ಒಕ್ಕೂಟದ ದಿವ್ಯಜ್ಯೋತಿ ನಿರಂತರ ಉಳಿತಾಯ ಗುಂಪು, ಬೆಂಗಳೂರು ನಗರ‌ ಜಿಲ್ಲೆಯ ಪಶ್ಚಿಮ‌ ನಗರ ಪಾಲಿಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸರೋಜಿನಿ‌ ನಾಯ್ಡು ಪ್ರದೇಶ ಮಟ್ಟದ ಒಕ್ಕೂಟದ ಅನ್ನಪೂರ್ಣೇಶ್ವರಿ ಮಹಿಳಾ ಸ್ವ-ಸಹಾಯ ಸಂಘ, ರಾಯಚೂರು‌ ಜಿಲ್ಲೆಯ ರಾಯಚೂರು ಮಹಾನಗರ ಪಾಲಿಕೆಯ ಗಣೇಶ ಪ್ರದೇಶ ಮಟ್ಟದ ಒಕ್ಕೂಟದ ಅಕ್ಕ ಮಹಾದೇವಿ ಮಹಿಳಾ ಸ್ವ-ಸಹಾಯ ಸಂಘ ಅತ್ಯುತ್ತಮ‌ ಮಹಿಳಾ ಸ್ವ ಸ-ಸಹಾಯ ಸಂಘ ಪ್ರಶಸ್ತಿಗೆ ಭಾಜನರಾದ ಸಂಘಗಳಾಗಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಯಾಣದ ‘ಮಹಾ ಮತಗಳ್ಳತನ’ ಮತ್ತು ಚುನಾವಣಾ ಆಯೋಗವೆಂಬ ಮೋದಿ ‘ಪಂಜರದ ಗಿಳಿ’

ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ‌ ಶಿವಕಾಂತಮ್ಮ ನಾಯಕ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ಡಾ. ಇ.ವಿ ರಮಣರೆಡ್ಡಿ ಕೆಎಸ್ ಡಿಎ ಅಧ್ಯಕ್ಷರಾದ ಶ್ರೀನಿವಾಸ್ ಎಂ, ಅಪರ ಅಭಿಯಾನ‌ ನಿರ್ದೇಶಕರು, ಸಂಜೀವಿನಿ- ಕೆಎಸ್ ಆರ್ ಎಲ್ ಪಿಎಸ್ ಹಾಗೂ‌ ಸಮಾರಂಭದಲ್ಲಿ ವಿವಿಧ ಇಲಾಖೆಗಳ ಗಣ್ಯರು ಉಪಸ್ಥಿತರಿದ್ದರು.

WhatsApp Image 2025 11 06 at 8.29.34 PM 3
WhatsApp Image 2025 11 06 at 8.29.34 PM 2
WhatsApp Image 2025 11 06 at 8.29.34 PM 1
WhatsApp Image 2025 11 06 at 8.29.33 PM 1
WhatsApp Image 2025 11 06 at 8.29.33 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...