ಚಿಕ್ಕಮಗಳೂರು | ಎಸ್ಸಿ, ಎಸ್ಟಿ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಕ್ರಮ: ಉಪ ವಿಭಾಗಾಧಿಕಾರಿ ದಲ್ಚಿತ್ ಕುಮಾರ್

Date:

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ನಿಯಂತ್ರಣ) ಕಾಯ್ದೆ 1989 ತಿದ್ದುಪಡಿ ನಿಯಮಗಳು 2013ರಂತೆ ನಿಯಮ 17 (ಎ) ಚಿಕ್ಕಮಗಳೂರು ಕಂದಾಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಚಿಕ್ಕಮಗಳೂರು ನಗರದ ತಾಲೂಕು ಪಂಚಾಯಿತಿ ಡಾ. ಬಿ.ಆರ್. ಅಂಬೇಡ್ಕ‌ರ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

- Advertisement -

ಈ ಸಭೆಯಲ್ಲಿ ಮಾತನಾಡಿದ ಉಪ ವಿಭಾಗಾಧಿಕಾರಿ ದಲ್ಚಿತ್ ಕುಮಾರ್, ಅರ್ಹ ಫಲಾನುಭವಿಗಳಿಗೆ ತಲುಪಿಸುವ ಹೊಣೆ ಆಯಾ ಇಲಾಖೆಗಳ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸ ಹಾಗೂ ಯೋಜನೆಗಳ ಕುರಿತ ಮಾಹಿತಿಯನ್ನು ಸಮುದಾಯದ ಜನರಿಗೆ ತಲುಪಿಸಿ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ರುದ್ರಭೂಮಿಗೆ ಸಂಬಂಧಿಸಿದಂತೆ ಸ್ಥಳ ಗುರುತಿಸಿ, ಜಮೀನು ಒದಗಿಸಲು ಹಾಗೂ ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸ್ಥಳ ಗುರುತಿಸಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದು ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಟಿತ್ ಕುಮಾರ್ ಸಭೆಯಲ್ಲಿ ತಿಳಿಸಿದರು.

ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಕುರುವಂಗಿ ಗ್ರಾಮದ ಸರ್ವೆ ನಂಬ‌ರ್ 42/01 ರಲ್ಲಿ ಸ್ಮಶಾನಕ್ಕೆ ಮೂರು ಎಕರೆ ಜಮೀನು ಮಂಜೂರು ಆಗಿದ್ದು, ಸ್ಥಳ ಪರಿಶೀಲಿಸಲಾಗಿದೆ. ಸದರಿ ಸ್ಥಳದಲ್ಲಿ ಯಾವುದೇ ಒತ್ತುವರಿಯಾಗಿರುವುದು ಕಂಡು ಬಂದಿರುವುದಿಲ್ಲ ಎಂದು ಕೊಪ್ಪ ತಾಲೂಕು ತಹಶೀಲ್ದಾ‌ರ್ ತಿಳಿಸಿದರು.

2024-25ನೇ ಸಾಲಿನಲ್ಲಿ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಶೇ. 90ರಷ್ಟು ಹಾನಿಯಾದ ಮನೆಗಳ ಸಂತ್ರಸ್ತರಿಗೆ ಎಸ್ ಡಿ ಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಪರಿಹಾರ ಧನ ಪಾವತಿಸಲು ಕ್ರಮವಹಿಸಲಾಗುತ್ತಿದೆ. ಸಾಗುವಳಿ ಚೀಟಿ ಇಲ್ಲದಿರುವ ಸಂತ್ರಸ್ತರಿಗೂ ಸಹ ಪರಿಹಾರ ಪಾವತಿಗಾಗಿ ಹಾಗೂ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಸಾಗುವಳಿ ಚೀಟಿ ನೀಡುವ ಕುರಿತು ನಿಯಮ ಅನುಸಾರ ಕ್ರಮವಹಿಸಲಾಗುವುದು ಎಂದು ದಲ್ಟಿತ್ ಕುಮಾರ್ ಸಭೆಯಲ್ಲಿ ತಿಳಿಸಿದರು.

ಇದನ್ನೂ ಓದಿದ್ದೀರಾ:http://ರಸ್ತೆ ಇಲ್ಲ, ನೆಟ್‌ವರ್ಕ್ ಇಲ್ಲ; ಮಳೆ ಬಂದ್ರೆ ಹೊರಜಗತ್ತಿನ ಸಂಪರ್ಕವೇ ಇಲ್ಲ! Chikkamagalur | Malenadu | Rainy

ಸಭೆಯಲ್ಲಿ ಕೊಪ್ಪ ತಾಲೂಕು ತಹಶೀಲ್ದಾ‌ರ್ ಲಿಖಿತ, ಚಿಕ್ಕಮಗಳೂರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವಿಜಯ್ ಕುಮಾರ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರೇವಣ್ಣ ಹಾಗೂ ಅನುಸೂಚಿ ಜಾತಿ ಮತ್ತು ಅನುಸೂಚಿ ಬುಡಕಟ್ಟುಗಳ ದೌರ್ಜನ್ಯ ಸಮಿತಿಯ ಸದಸ್ಯರುಗಳಾದ ಹುಣಸೆಮಕ್ಕಿ ಲಕ್ಷ್ಮಣ, ರಾಜ ಶಂಕ‌ರ್, ಕೆ.ಎಂ. ರಾಮಣ್ಣ ಇನ್ನಿತರರು ಉಪಸ್ಥಿತಿಯಲ್ಲಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...