- ಈ ಹಿಂದೆ ಪುನೀತ್ – ರಾಜಕುಮಾರ್ ಕೆಎಂಎಫ್ ರಾಯಭಾರಿಯಾಗಿದ್ದರು
- ನಟ ಶಿವರಾಜ್ ಕುಮಾರ್‌ಗೆ ಅಭಿನಂದಿಸಿ ಟ್ವೀಟ್ ಮಾಡಿದ ಭೀಮಾ ನಾಯಕ್
ಈ ಹಿಂದೆ ದಿವಂಗತ ಪುನೀತ್ ರಾಜಕುಮಾರ್ ಕೆಎಂಎಫ್ ರಾಯಭಾರಿಯಾಗಿದ್ದರು. ಇದೀಗ ಅವರ ಸಹೋದರ, ನಟ ಶಿವರಾಜ್ ಕುಮಾರ್ ನಂದಿನಿ ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ನೇಮಕವಾಗಿದ್ದಾರೆ.
ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಮತ್ತು ಎಂಡಿ ಜಗದೀಶ್ ಅವರ ಮನವಿಗೆ ಸ್ಪಂದಿಸಿದ ಶಿವರಾಜ್‌ಕುಮಾರ್ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ.
ನಂದಿನಿ ಹಾಲಿನ ರಾಯಭಾರಿಯಾಗಿ ನೇಮಕಗೊಂಡ ಬಳಿಕ ನಟ ಶಿವರಾಜ್ ಕುಮಾರ್ ಅವರಿಗೆ ಅಧ್ಯಕ್ಷ ಭೀಮಾನಾಯಕ್ ಹೂಗುಚ್ಚ ನೀಡಿ ಅಭಿನಂದಿಸಿದ್ದಾರೆ.
“ಸ್ಯಾಂಡಲ್ ವುಡ್ ನಟ ಹ್ಯಾಟ್ರಿಕ್ ಹೀರೋ ಡಾ. ಶಿವಣ್ಣ ಅವರು ‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಒಪ್ಪಿಕೊಂಡಿರುವ ಕರುನಾಡ ಚಕ್ರವರ್ತಿಗೆ ಅಭಿನಂದನೆ ಸಲ್ಲಿಸಿ ಶುಭ ಕೋರಲಾಯಿತು. ಕೆ.ಎಂ.ಎಫ್ ಮತ್ತು ಸಮಸ್ತ ಕರ್ನಾಟಕ ರೈತರ ಹಾಗೂ ಜನತೆಯ ಪರವಾಗಿ ಶಿವಣ್ಣ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು” ಎಂದು ಟ್ವೀಟ್ ಮಾಡಿ ಭೀಮಾ ನಾಯಕ್ ಅಭಿನಂದಿಸಿದ್ದಾರೆ.