ಹುಬ್ಬಳ್ಳಿ-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು; ಕೆಲವು ನಿಲ್ದಾಣಗಳಲ್ಲಿ ಹೆಚ್ಚು ಸಮಯ ನಿಲುಗಡೆ ಅವಕಾಶ

Date:

  • ಮಾರ್ಚ್ 22ರಿಂದಲೇ ಹೊಸ ಆದೇಶ ಜಾರಿಗೆ
  • ಪ್ರಯಾಣಿಕರ ಅನುಕೂಲಕ್ಕಾಗಿ ಬದಲಾವಣೆ

ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಇತ್ತೀಚೆಗೆ ಪರಿಚಯಿಸಲಾದ ರೈಲು ಸಂಖ್ಯೆ 07339/07340 ಮತ್ತು 07353/07354ರ ರೈಲು ಗಾಡಿಗಳು ಪ್ರಯಾಣಿಕರ ಅನುಕೂಲಕ್ಕಾಗಿ ಕೆಲವು ನಿಲ್ದಾಣಗಳಲ್ಲಿ ಹೆಚ್ಚುವರಿ ಸಮಯ ನಿಲುಗಡೆಗೆ ಅವಕಾಶ ಒದಗಿಸಲಾಗಿದೆ.

ಮಾರ್ಚ್ 22ರಿಂದ ಜಾರಿಗೆ ಬರುವಂತೆ, ಈ ರೈಲು (07339) ಬೆಳಿಗ್ಗೆ 03:33 ಕ್ಕೆ ಅರಸೀಕೆರೆಗೆ ಆಗಮಿಸುತ್ತದೆ. ಬೆಳಿಗ್ಗೆ 03:36ಕ್ಕೆ ಹೊರಡುತ್ತದೆ. ಅದೇ ರೀತಿ ರೈಲು ಸಂಖ್ಯೆ 07340 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಸ್ಪೆಷಲ್ ಎಕ್ಸ್‌ಪ್ರೆಸ್‌ ಮಾರ್ಚ್ 23ರಿಂದ ಮುಂಜಾನೆ 02:07ಕ್ಕೆ ಅರಸೀಕೆರೆಗೆ ಬಂದು 02:10ಕ್ಕೆ ಹೊರಡಲಿದೆ.

ರೈಲು ಸಂಖ್ಯೆ 07353/07354 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್‌ ವಿಶೇಷ ರೈಲು ಯಶವಂತಪುರ, ತುಮಕೂರು ಮತ್ತು ಅರಸೀಕೆರೆ ನಿಲ್ದಾಣಗಳಲ್ಲಿ ಹೆಚ್ಚು ಸಮಯ ನಿಲುಗಡೆಯನ್ನು ಹೊಂದಿರುತ್ತದೆ.

ಈ ರೈಲು (07353) ಯಶವಂತಪುರದಿಂದ ಬೆಳಿಗ್ಗೆ 07.39/07.41ಕ್ಕೆ, ತುಮಕೂರು 08.28/08.30ಕ್ಕೆ ಮತ್ತು ಅರಸೀಕೆರೆ ಬೆಳಿಗ್ಗೆ 09.40/09.43ಕ್ಕೆ ಆಗಮಿಸಿ, ನಿರ್ಗಮಿಸುತ್ತದೆ. ಅದೇ ರೀತಿ ರೈಲು ಸಂಖ್ಯೆ 07354 ಅರಸೀಕೆರೆಯಿಂದ ರಾತ್ರಿ 7.17ಕ್ಕೆ, ತುಮಕೂರು ರಾತ್ರಿ 8.48ಕ್ಕೆ ಹಾಗೂ ಯಶವಂತಪುರದಿಂದ ರಾತ್ರಿ 10.08ಕ್ಕೆ ಹೊರಡಲಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ...

ಶಿಗ್ಗಾವಿ | ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡ ಸ್ಥಳಾಂತರಕ್ಕೆ ಒತ್ತಾಯ

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಬಾಡಿಗೆ...

ಚಿಕ್ಕಬಳ್ಳಾಪುರ | ಅಂತರ್ಜಾತಿ ಪ್ರೇಮಿಗಳು ಕಾಣೆ; ಸಹೋದರನ ಆಟೋಗೆ ಬೆಂಕಿ ಹಚ್ಚಿದ ಸವರ್ಣೀಯರು

ಅಂತರ್ಜಾತಿಯ ಯುವಕ ತಮ್ಮ ಮಗಳನ್ನು ಪ್ರೀತಿಸಿ ಕರೆದುಕೊಂಡು ಹೋಗಿದ್ದಾನೆಂದು ಕುಪಿತಗೊಂಡ ಯುವತಿಯ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...