ಕೊಪ್ಪಳ | ಚುನಾವಣಾ ಕರ್ತವ್ಯದ ಜೊತೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆಯೂ ಅಗತ್ಯ :ಜಿಲ್ಲಾಧಿಕಾರಿ

Date:

ಚುನಾವಣಾ ಕರ್ತವ್ಯದ ಜೊತೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೂ ಹೆಚ್ಚಿನ ಗಮನ ಕೊಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ಸೂಚಿಸಿದರು.

ಕೊಪ್ಪಳ ನಗರದ  ಹಲವು ಇಲಾಖೆಗಳ ಅಧಿಕಾರಿಗಳೊಂದಿಗೆ ಮೇ 5ರಂದು ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, “ಜೀವಜಲವು ಪ್ರತಿಯೊಬ್ಬರಿಗೂ ಪ್ರತಿದಿನ ಅತವಶ್ಯಕವಾಗಿ ಬೇಕಾಗುತ್ತದೆ. ದಿನ ಬೆಳಗಾದರೆ ನೀರಿನಿಂದಲೇ ಬದುಕು ಆರಂಭವಾಗುತ್ತದೆ. ಬೀದಿ ದೀಪ, ರಸ್ತೆ ಸೌಕರ್ಯ ಎಷ್ಟು ಮುಖ್ಯವೋ, ನೀರು ಸಹ ಸಾರ್ವಜನಿಕರಿಗೆ ಅತ್ಯವಶ್ಯವಾಗಿ ಬೇಕಾಗುತ್ತದೆ” ಎಂದು ತಿಳಿಸಿದರು.

“ಅಧಿಕಾರಿಗಳು ನೀರಿನ ಅವಶ್ಯಕತೆಯನ್ನು ಅರಿತುಕೊಳ್ಳಬೇಕು. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ದೂರು ಹೇಳಿದಾಗ ಕೂಡಲೇ ಕಾರ್ಯಪ್ರವೃತ್ತರಾಗಿ ಸ್ಪಂದನೆ ನೀಡಬೇಕು” ಎಂದು ಸೂಚಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬೇಸಿಗೆ ಇರುವಾಗಲೇ ಮಳೆ ಬೀಳಲು ಆರಂಭವಾಗಿದೆ. ಮಳೆಯಿಂದ ಜನ-ಜಾನುವಾರುಗಳಿಗೆ ಹಾನಿಯಾದ ಬಗ್ಗೆ ಗೊತ್ತಾದಲ್ಲಿ ನಿಗದಿಪಡಿಸಿದ ಅವಧಿಯೊಳಗೆ ಪರಿಹಾರಕ್ಕೆ ಕ್ರಮ ಜರುಗಿಸಬೇಕು” ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಾನುವಾರುಗಳಿಗೆ ಮೇವಿನ ಮತ್ತು ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

“ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹಲವಾರು ಸುತ್ತಿನಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಹಿಂದಿನ ಸಭೆಗಳಲ್ಲಿ ನಿರ್ದೇಶನ ನೀಡಿದಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಗ್ರಾಮಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ನರೇಗಾ ಕಾಮಗಾರಿಗಳು ನಿಯಮಿತವಾಗಿ ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮನರೇಗಾ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸುವಂತೆ ಆಗ್ರಹ

“ತಾಲೂಕು ಮಟ್ಟದಲ್ಲಿಯೂ ಸಭೆ ನಡೆಸಿ ಚರ್ಚಿಸಿ ಜನತೆಗೆ ಸ್ಪಂದನೆ ನೀಡಬೇಕು ಎಂದು ತಿಳಿಸಿದ್ದು, ವಿದ್ಯುತ್ ಕಡಿತದ ಕಾರಣಕ್ಕೆ ಕುಡಿಯುವ ನೀರು ಸಿಗುತ್ತಿಲ್ಲ ಎನ್ನುವ ದೂರುಗಳು ಬರಕೂಡದು. ವಿದ್ಯುತ್ ತಂತಿ, ಕಂಬಗಳು ದುರಸ್ತಿಯಿದ್ದಲ್ಲಿ ಬೇಗನೆ ಸರಿಪಡಿಸಿ ಕುಡಿವ ನೀರು ಪೂರೈಕೆಗೆ ಸಮರ್ಪಕ ವಿದ್ಯುತ್ ವ್ಯವಸ್ಥೆಯಾಗಬೇಕು” ಎಂದು ಜಿಲ್ಲಾಧಿಕಾರಿಗಳು ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಆದ್ಯತೆಯ ಮೇರೆಗೆ ಜಲಜೀವನ್ ಮಿಷನ್ ಮತ್ತು ಡಿಬಿಓಟಿ ದುರಸ್ತಿಗೆ ಒತ್ತು ಕೊಡಬೇಕು. ಜನರಿಗೆ ಸಾಕಷ್ಟು ಅನುಕೂಲಕರವಾದ ಜೆಜೆಎಂ ಮತ್ತು ಡಿಬಿಓಟಿ ಮೂಲಕವೇ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು” ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ರಾಹುಲ್ ರತ್ನಂ ಪಾಂಡೆಯ ಸೇರಿದಂತೆ ನಗರಸಭೆ ಪೌರಾಯುಕ್ತರು, ಹಲವು ಪುರಸಭೆ ಹಾಗೂ ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗದ ಅಭಿಯಂತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...