ಆದಿಉಡುಪಿ ಯಂಗ್ ಮೆನ್ಸ್ ಅಸೋಸಿಯೇಷನ್, ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿಯ ಸಹಯೋಗದೊಂದಿಗೆ ಆದಿಉಡುಪಿ ಮಸೀದಿ ಇ ನೂರುಲ್ ಇಸ್ಲಾಂನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿಯ ಉಸ್ತುವಾರಿ ವೀಣಾ ಕುಮಾರಿ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ಮೂರು ರಕ್ತನಿಧಿ ಕೇಂದ್ರವಿದೆ ಉಡುಪಿ, ಮಣಿಪಾಲ, ಕುಂದಾಪುರ ಮೂರು ಕಡೆಗಳಲ್ಲಿಯೂ ರಕ್ತದ ಕೊರತೆಯಿದೆ ಅವಶ್ಯಕತೆಗೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ ಸಮಯಕ್ಕೆ ಸರಿಯಾಗಿ ರಕ್ತಸಿಗದೆ ಎಷ್ಟೋ ಸಾವು ನೋವುಗಳು ಸಂಬಂಧಿಸಿದೆ ರಕ್ತದ ಅವಶ್ಯಕತೆಯನ್ನು ಪೂರೈಸುವ ನಿಟ್ಟಿನಲ್ಲಿ ಸಮಾಜದ ಸಂಘ ಸಂಸ್ಥೆಗಳು ರಕ್ತದಾನ ಮಾಡುವ ಮೂಲಕ ಜಾಗೃತಿಯನ್ನು ಮೂಡಿಸಿ ರಕ್ತದ ಅವಶ್ಯಕತೆಯನ್ನು ಪೂರೈಸಲು ಸಹಕಾರಿ ಆಗುತ್ತದೆ ಎಂದು ಹೇಳಿ ರಕ್ತದಾನದ ಮಹತ್ವವನ್ನು ತಿಳಿಸಿದರು.
ಆದಿಉಡುಪಿ ಯಂಗ್ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಶೇಖ್ ಇಮ್ರಾನ್ ರವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು.
ಯಂಗ್ ಮೆನ್ಸ್ ಅಸೋಸಿಯೇಷನ್ ನ ಸದಸ್ಯರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದಾನಿಗಳಿಂದ ಸುಮಾರು 61 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
