ಸರ್ಕಾರಿ ಐಟಿಐ ಪ್ರವೇಶಕ್ಕೆ ಆಗಸ್ಟ್ 2025ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸರ್ಕಾರಿ ಮಹಿಳಾ ಐಟಿಐ ಸಂಸ್ಥೆಯಲ್ಲಿ ಲಭ್ಯವಿರುವ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಬಯಸುವ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್ www.cite.karnataka.gov.in ಮೂಲಕ ಅಥವಾ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ.
ಕೋರ್ಸ್‌ಗಳ ವಿವರ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಕಂಪ್ಯೂಟರ್ ಆಪರೇಟರ್ ಅಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರಾನಿಕ್ ಮೆಕಾನಿಕ್, ಎಲೆಕ್ಟ್ರಿಷಿಯನ್, ರೆಫ್ರಿಜರೇಷನ್ ಅಂಡ್ ಏರ್ ಕಂಡೀಶನ್ ಟೆಕ್ನಿಷಿಯನ್ ಮೆಕಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಸಿಎನ್‍ಸಿ ಮೆಷಿನಿಂಗ್ ಟೆಕ್ನಿಷಿಯನ್, ವರ್ಚುವಲ್ ಅನಾಲಿಸಿಸ್ ಅಂಡ್ ಡಿಸೈನರ್ ಈಇಒ(finite Element Method), ಇಂಡಸ್ಟ್ರಿಯಲ್ ರೋಬೋಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್, ಮ್ಯಾನುಫ್ಯಾಕ್ಚರಿಂಗ್ ಪ್ರೋಸೆಸ್ ಕಂಟ್ರೋಲ್ ಅಂಡ್ ಆಟೋಮೇಷನ್(Manufacturing Process Control and Automation), ಎಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿದ್ದೀರಾ? ಮಂಗಳೂರು | ಡಿಎಲ್‌ಇಡಿ, ಡಿಪಿಇಡಿ ಕೋರ್ಸ್ ದಾಖಲಾತಿಗೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಗೆ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆ 9880119147 ,9448858417, 9620766870 ಸಂಪರ್ಕಿಸುವಂತೆ ಮಂಗಳೂರಿನ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.