ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ ಪಾಟೀಲ್ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಉರುಳಿದೆ. ಶಾಸಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಶುಕ್ರವಾರ ಅಫಜಲಪುರ ತಾಲೂಕಿನ ಜೇವರ್ಗಿ(ಬಿ) ಗ್ರಾಮದ ಶಾಲೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತಗ್ಗು ಗುಂಡಿಗೆ ಉರುಳಿದ ಪರಿಣಾಮ ಶಾಸಕರು ಹಾಗೂ ಚಾಲಕ ಮೋಬಿನ್ ಗಾಯಗೊಂಡರು ಎಂದು ತಿಳಿದು ಬಂದಿದೆ.
ಕೂಡಲೇ ಸ್ಥಳೀಯರು ಶಾಸಕರು ಹಾಗೂ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.