ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೇ ಸರಣಿ ಸಭೆಗೆ ಮುಂದಾದ ಸಿಎಂ, ಡಿಸಿಎಂ

Date:

ನೂತನ ಸಚಿವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳ ಸರಣಿ ಸಭೆ ಕರೆದಿದ್ದಾರೆ.

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆ, ಶಿಕ್ಷಣ, ಸಾರಿಗೆ, ಆಹಾರ, ಇಂಧನ ಇಲಾಖೆಗಳಿಗೆ ದೊಡ್ಡ ಜವಾಬ್ದಾರಿ ಇದ್ದು, ಗ್ಯಾರಂಟಿಗಳನ್ನು ಜಾರಿಗೆ ತರುವ ಸಂಬಂಧ ನೀತಿ, ನಿಯಮಾವಳಿಗಳನ್ನು ರೂಪಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಐದು ಗ್ಯಾರಂಟಿ ಇಲಾಖೆಗಳ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸೋಮವಾರ ಮಹತ್ವದ ಸಭೆ ನಡೆಸಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿದೆ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಸಂಬಂಧಿಸಿದ ಐದು ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿರುವಂತೆ ಸೂಚಿಸಲಾಗಿದೆ.

ಜೂನ್‌ 1ರಂದು ಸಚಿವ ಸಂಪುಟ ಸಭೆ ನಡೆಯಲ್ಲಿದ್ದು, ಅಂದಿನ ಸಭೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಜಾರಿಗೆ ಕುರಿತು ಮಹತ್ವದ ಸಂಗತಿ ಪ್ರಕಟವಾಗುವ ಸಾಧ್ಯತೆ ಇದೆ.

ಡಿಸಿಎಂ ಡಿಕೆ ಶಿವಕುಮಾರ್‌ರಿಂದದಲೂ ಸಭೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ‌ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಅವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅವರು ಕೂಡ ವಿವಿಧ ಅಧಿಕಾರಿಗಳೊಂದಿಗೆ ಸೋಮವಾರ ಸರಣಿ ಸಭೆ ನಡೆಸಲಿದ್ದಾರೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಪಾಲಿಕೆ ಕಚೇರಿಯಲ್ಲಿ ಇಂದು ಡಿಕೆ ಶಿವಕುಮಾರ್‌ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ಬಿಡಿಎ ಅಧಿಕಾರಿಗಳೊಂದಿಗೆ ಬಿಡಿಎ ಪ್ರಧಾನ ಕಚೇರಿಯಲ್ಲಿ ಸಭೆ ಕರೆದಿದ್ದಾರೆ. ಸಂಜೆ ನೀರಾವರಿ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ ನಡೆಸಲಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕೋಮುವಾದಿ ಶಕ್ತಿ ಸೋಲಿಸಿ, ಸಂವಿಧಾನ ಉಳಿಸಿ: ಸುಹೇಲ್ ಅಹಮದ್

ಸ್ವಾತಂತ್ರ್ಯ ಭಾರತದಲ್ಲಿ ಇಂದಿನ ಲೋಕಸಭಾ ಚುನಾವಣೆ ಐತಿಹಾಸಿಕವಾದದ್ದು ಯಾಕೆ ಅಂದ್ರೆ ಪ್ರಜಾಪ್ರಭುತ್ವ...

ಯಾದಗಿರಿ | ರಾಕೇಶ ಹತ್ಯೆ ಖಂಡಿಸಿ ಮಾದಿಗ ಸಮಾಜದ ಪ್ರತಿಭಟನೆ

ದಲಿತ ಯುವಕ ರಾಕೇಶ ಕೊಲೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ಮಾದಿಗ ಸಮಾಜ...

ಶಿವಮೊಗ್ಗ | ಕಾಂಗ್ರೆಸ್‌ ಮುಖಂಡರ ಮನೆ ಮನೆ ಪ್ರಚಾರ; ಕಾರ್ಡ್‌ ಹಂಚಿ ಮತಯಾಚನೆ

ಶಿವಮೊಗ್ಗನಗರದ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಮನೆಮನೆಗೆ ತೆರಳಿ...

ತುಮಕೂರು | ನಟಿ ಶೃತಿ ತಮ್ಮ ಹೇಳಿಕೆ ವಾಪಸ್ ಪಡೆಯಬೇಕೆಂದು ಆಗ್ರಹ

ಬಿಜೆಪಿ ಪಕ್ಷದ ಪ್ರಚಾರಕಿ ನಟಿ ಶ್ರುತಿ ಅವರ ಫ್ರಿ ಬಸ್ ಕುರಿತ...