ಮೈಸೂರು | ಹೆದ್ದಾರಿ ಕಾಮಗಾರಿ ಪೂರ್ಣಗೊಂಡ ಬಳಿಕವೇ ವಾಹನ ಸಂಚಾರ ಆರಂಭಿಸಿ: ಬಡಗಲಪುರ ನಾಗೇಂದ್ರ

Date:

  • ಆರು ತಿಂಗಳಲ್ಲಿ 335ಕ್ಕೂ ಹೆಚ್ಚು ಅಪಘಾತ, 84 ಮಂದಿ ಸಾವು
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.26ಕ್ಕೆ ಸೆಸ್ಕ್ ಎದುರು ಪ್ರತಿಭಟನೆ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೂ ಆ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಬೇಕು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ಮೊನ್ನೆ ಮಳೆ ಸುರಿದಾಗಿನಿಂದ ‘ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ’ಯಲ್ಲಿ ವಾಹನಗಳು ಸಂಚಾರ ಮಾಡಲು ಸಾಧ್ಯವಾಗದಂತಾಗಿದೆ. ಈ ಹೆದ್ದಾರಿಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದ ಪರಿಣಾಮ ಅಪಘಾತ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ. ಮತ್ತೊಂದೆಡೆ ಹೆದ್ದಾರಿಯ ಉದ್ದಕ್ಕೂ ಯಾವುದೇ ಪೆಟ್ರೋಲ್ ಬಂಕ್ ಸೇರಿದಂತೆ ಒಂದು ಶೌಚಾಲಯ ವ್ಯವಸ್ಥೆಯೂ ಇಲ್ಲದಾಗಿದೆ” ಎಂದು ಅವ್ಯವಸ್ಥೆ ತೆರಿದಿಟ್ಟರು.

“ವಾಹನ ಸವಾರರಿಂದ ದುಪ್ಪಟ್ಟು ಟೋಲ್ ವಸೂಲಿ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದೆ. ಹಾಗಾಗಿ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಬೇಕು. ಒಂದು ವೇಳೆ ನಮ್ಮ ಮನವಿಯನ್ನು ಪುರಸ್ಕರಿಸದಿದ್ದರೆ 101 ವಾಹನಗಳ ಜೊತೆಗೆ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಆರು ತಿಂಗಳಲ್ಲಿ 84 ಮಂದಿ ಸಾವು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ವಾಹನ ಸಂಚಾರ ಆರಂಭವಾಗಿ ಆರು ತಿಂಗಳೊಳಗೆ ಅಪಘಾತಗಳ ಸಂಖ್ಯೆ ಏರಿಕೆ ಆಗಿದೆ. ಒಟ್ಟು 84ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 2022ರ ಸೆಪ್ಟೆಂಬರ್ ನಿಂದ ನೂತನ ಹೆದ್ದಾರಿಯಲ್ಲಿ ವಾಹನ ಸಂಚಾರ ಆರಂಭವಾಗಿದ್ದು, ಅಲ್ಲಿಂದ ಇಲ್ಲಿಯವರೆಗೂ 335ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಎಕ್ಸ್‌ಪ್ರೆಸ್‌ ಹೆದ್ದಾರಿ ಕಾಮಗಾರಿ ಅಂತಿಮ ಹಂತದ ರಸ್ತೆಯಲ್ಲಿ ಡಿಸೆಂಬರ್ ಮತ್ತು ಜನವರಿ ತಿಂಗಳಿನಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿವೆ ಎಂದರು.

ಸೆಸ್ಕ್ ಕಚೇರಿ ಎದುರು ಪ್ರತಿಭಟನೆ

ಬೇಸಿಗೆ ಸಮಯದಲ್ಲಿ ರೈತರಿಗೆ ಸೆಸ್ಕ್ ಶಾಕ್ ನೀಡುತ್ತಿದೆ. ಇದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಹತ್ತು ಗಂಟೆ ಗುಣಾತ್ಮಕ ವಿದ್ಯುತ್ ಪೂರೈಕೆ, 75 ಗಂಟೆ ಒಳಗೆ ಟ್ರಾನ್ಸ್ಫಾರ್ಮರ್ ರಿಪೇರಿ ಮಾಡಬೇಕು. ವಿದ್ಯುತ್ ಪೂರೈಕೆಯಲ್ಲಿ ತಾರತಮ್ಯ ಮಾಡಬಾರದು. ಮತ್ತು ಭಾಗ್ಯಜ್ಯೋತಿ ಸಂಪರ್ಕ ಕಡಿತ ಮಾಡಬಾರದು ಎಂಬುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 26ರಂದು ಸೆಸ್ಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ರೈತ ಮುಖಂಡರಾದ ಮಂಡಕಳ್ಳಿ ಮಹೇಶ್, ಮರಂಕಯ್ಯ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ; ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ...

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ...

ಧಾರವಾಡ | ಮಹದಾಯಿ ಯೋಜನೆ; ಸದನದಲ್ಲಿ ಚರ್ಚೆಯಾಗದಿದ್ದಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆಯ ಎಚ್ಚರಿಕೆ

ಕಳಸಾ ಬಂಡೂರಿ ನಾಲಾ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಸಾಕಷ್ಟು ಹೋರಾಟ...

ಬೆ.ಗ್ರಾಮಾಂತರ | ಮೋಡ ಕವಿದ ವಾತಾವರಣ; ರೇಷ್ಮೆಹುಳುಗಳಿಗೆ ಹಾಲು ತೊಂಡೆ ರೋಗದ ಭೀತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ...