ಅಫಜಲಪುರ | ಕಬ್ಬು ಕಟ್ಟಿಂಗ್‌, ಎಫ್‌ಆರ್‌ಪಿ, ಸಾಗಾಣಿಕೆ ವೆಚ್ಚ ನಿಗದಿಗೆ ರೈತರ ಆಗ್ರಹ: ಅ.23ರಂದು ರಸ್ತೆತಡೆ ಚಳವಳಿ

Date:

ಕಬ್ಬು ಕಟ್ಟಿಂಗ್‌ ವೆಚ್ಚ, ಎಫ್‌ಆರ್‌ಪಿ ಹಾಗೂ ಸಾಗಾಣಿಕೆ ವೆಚ್ಚ ನಿಗದಿಪಡಿಸಿ ಸಕ್ಕರೆ ಕಾರ್ಖಾನೆಗಳು ಪ್ರಾರಂಭಿಸಬೇಕು. ಅಲ್ಲಿಯವರೆಗೆ ಸಕ್ಕರೆ ಕಾರ್ಖಾನೆಗಳು ಚಾಲು ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌) ಅಕ್ಟೋಬರ್‌ 23ರಂದು ಅಫಜಲಪುರ ತಾಲೂಕಿನ ಚೌಡಾಪುರ ಕ್ರಾಸ್ ಬಳಿ ರಸ್ತೆತಡೆ ಚಳವಳಿ ಹಮ್ಮಿಕೊಂಡಿದೆ.

- Advertisement -

“ಕೇಂದ್ರ ಸರ್ಕಾರದ ಎಫ್‌ಆರ್‌ಪಿ ಪ್ರಕಾರ ಪ್ರತಿ ಟನ್ ಕಬ್ಬಿಗೆ ₹3,500 ನಿಗದಿಪಡಿಸಬೇಕು. ಸಕ್ಕರೆ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಮೋಸ ಮಾಡುವುದನ್ನು ತಡೆಗಟ್ಟಿ ಮುಖ್ಯ ಗೇಟಿನಲ್ಲಿ ತೂಕದ ಮಾಪನ((ವೆ ಬ್ರಿಜ್) ಹಾಕಿ, ರೈತರು ಎತ್ತಿನ ಬಂಡಿ, ಟ್ಯ್ರಾಕ್ಟರ್‌, ಲಾರಿಗಳಲ್ಲಿ ತರುವ ಕಬ್ಬನ್ನು ರೈತರ ಸಮ್ಮುಖದಲ್ಲಿಯೇ ತೂಕ ಮಾಡಿ ಗಾಡಿಗಳನ್ನು ಕಾರ್ಖಾನೆಗಳ ಒಳಗಡೆ ಕಳುಹಿಳಿಸಬೇಕು” ಎಂದು ಒತ್ತಾಯಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕಬ್ಬು ಬೆಳೆಗಾರರಿಗೆ ಅನ್ಯಾಯವಾಗುವುದನ್ನು ತಡೆಗಟ್ಟಲು 12, 13 ತಿಂಗಳ ಒಳಗಾಗಿ ಸರಿಯಾದ ಸಮಯಕ್ಕೆ ಕಬ್ಬು ಕಟಾವು ಮಾಡಬೇಕು. ತಡಮಾಡಿ ಕಬ್ಬು ಕಟಾವು ಮಾಡಿದರೆ ಕಬ್ಬು ಬೆಂಡು ಬಂದು ಸಕ್ಕರೆ ಅಂಶ ಕಮ್ಮಿಯಾಗಿ ರೈತರಿಗೆ ಅನ್ಯಾಯವಾಗುತ್ತದೆ. ರೈತರ ಸಮ್ಮುಖದಲ್ಲಿ ಸಕ್ಕರೆ ಇಳುವರಿ ತೆಗೆಯಬೇಕು. ಪ್ರತಿ 15 ದಿನಕ್ಕೊಮ್ಮೆ ಸಕ್ಕರೆ ಇಳುವರಿ ತೆಗೆಯಬೇಕು. ಕಬ್ಬು ಕಾಟಾವು ಮಾಡಿ ತೂಕ ಮಾಡಿದ 14 ದಿನದ ಒಳಗಾಗಿ ರೈತರ ಖಾತೆಗೆ ಹಣ ಪಾವತಿಸಬೇಕು. ಕಬ್ಬಿನ ಉಪ ಉತ್ಪನ್ನಗಳಾದ ಮೋಲಾಸಸ್, ಕಾಕಂಬಿಕ, ಎಥಿನಾಲ್, ಡಿಸ್ಟಲರಿಸ್, ವಿದ್ಯುತ್, ಬಯೋ ಕಾಂಪೋಸ್ಟ್ ಪಶು ಆಹಾರ ಬಗಾಸಸ್ ಸೇರಿದಂತೆ ಇತರೆ ಉತ್ಪನ್ನಗಳ ಲಾಭಾಂಶದಲ್ಲಿ ರೈತರಿಗೆ ಪಾಲು ಕೋಡಬೆಕು” ಎಂದು ಆಗ್ರಹಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ತಾಪುರ | ರ‍್ಯಾಲಿ ನಡೆಸಲು ತ್ರಿಕೋನ ಸ್ಪರ್ಧೆ: ಆರೆಸ್ಸೆಸ್‌ ಬಳಿಕ ದಲಿತ ಪ್ಯಾಂಥರ್ಸ್, ಭೀಮ್ ಆರ್ಮಿ ಮನವಿ

ರೇಣುಕಾ ಸಕ್ಕರೆ ಕಾರ್ಖಾನೆ, ಕೆಪಿಆರ್ ಚಿಣಮಗೆರಿ ಸಕ್ಕರೆ ಕಾರ್ಖಾನೆ,‌ ಉಗಾರ ಶುಗರ್ಸ್‌ ಸಕ್ಕರೆ ಕಾರ್ಖಾನೆ, NSL ಸನೂರು ಸಕ್ಕರೆ ಕಾರ್ಖಾನೆಗಳು ಹಿಂದಿನ ದಿನದಲ್ಲಿಯೂ ಹೆಚ್ಚುವರಿ ಕಟಿಂಗ್ ವೆಚ್ಚಗಳನ್ನು, ಕಟ್‌ಮಾಡಿದ ಬಾಕಿ ಹಣವನ್ನು ಕಬ್ಬು ಬೆಳೆಗಾರರ ಖಾತೆಗೆ ಹಾಕಬೇಕು. ಅಲ್ಲದೆ ಜಿಲ್ಲಾಧಿಕಾರಿಗಳು, ಫುಡ್ ಡಿಡಿ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ರೈತರ ಸಮ್ಮುಖದಲ್ಲಿ ಸಭೆ ಕರೆಯಲು ಜಿಲ್ಲಾಡಳಿತ ಸಭೆ ನಡೆಸಬೇಕು” ಎಂದು KSFF ಕಲಬುರಗಿ ಜಿಲ್ಲಾ ಸಂಚಾಲಕ ಶರಣಬಸಪ್ಪಾ ಮಮಶೆಟ್ಟಿ ಒತ್ತಾಯಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...