ಮಂಗಳೂರು | ಮುಸ್ಲಿಂ ಯುವಕನ ಗುಂಪು ಹತ್ಯೆ: ಮತ್ತೆ ಐವರ ಬಂಧನ; ಮೃತದೇಹ ಕೇರಳಕ್ಕೆ ಕೊಂಡೊಯ್ದ ಕುಟುಂಬಸ್ಥರು

Date:

ದಕ್ಷಿಣ ಕನ್ನಡ ಜಿಲ್ಲೆಯ ವಾಮಂಜೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಮುಸ್ಲಿಂ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರಾದ ಒಟ್ಟು ಆರೋಪಿಗಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

- Advertisement -

ಬಂಧಿತ ಆರೋಪಿಗಳನ್ನು ಯತಿರಾಜ್, ಸಚಿನ್, ಅನಿಲ್, ಸುಶಾಂತ್ ಮತ್ತು ಆದರ್ಶ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಈ ಹಿಂದೆ ಇದೇ ಪ್ರಕರಣದಲ್ಲಿ 15 ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಐವರನ್ನು ಬಂಧಿಸುವ ಮೂಲಕ ತನಿಖೆಗೆ ಮತ್ತಷ್ಟು ಬಲ ಬಂದಿದೆ ಎಂದಿದ್ದಾರೆ.

IMG 20250430 WA0313

ಗುಂಪು ಹತ್ಯೆಯಾದ ವ್ಯಕ್ತಿಯನ್ನು ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಳ್ಳಿ ಗ್ರಾಮದ ನಿವಾಸಿ ಮುಹಮ್ಮದ್ ಅಶ್ರಫ್(38) ಎಂದು ಗುರುತಿಸಲಾಗಿದೆ.

ಮಾಧ್ಯಮಗಳಲ್ಲಿ ವಿಚಾರ ತಿಳಿಯುತ್ತಿದ್ದಂತೆಯೇ ಮೃತನ ಗುರುತನ್ನು ಆತನ ಕುಟುಂಬಸ್ಥರು ಪತ್ತೆ ಹಚ್ಚಿದ್ದಾರೆ. ಮೃತ ವ್ಯಕ್ತಿಯು ಸಣ್ಣ ಪ್ರಮಾಣದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

1000329742

ಈ ಕುರಿತು ಮಾಹಿತಿ ನೀಡಿದ ಮೃತರ ತಮ್ಮ ಅಬ್ದುಲ್ ಜಬ್ಬಾರ್(36) ಅವರು, “ಘಟನೆಯ ಬಗ್ಗೆ ಪೊಲೀಸರು ನಮಗೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ನಾವು ಮಂಗಳೂರಿಗೆ ಬಂದಿದ್ದೇವೆ. ಮೃತದೇಹವು ನನ್ನ ಅಣ್ಣನದ್ದೇ ಆಗಿರುತ್ತದೆ. ನನ್ನ ಅಣ್ಣನಿಗೆ ನಿರ್ದಿಷ್ಟವಾದ ಕೆಲಸ ಇರಲಿಲ್ಲ. ಅವರು ಊರೂರು ತಿರುಗುತ್ತಾ ಸಿಕ್ಕಿದ ಕೆಲಸ ಮಾಡುತ್ತಿದ್ದರು. ಅವರು ಎಲ್ಲಿ ಇರುತ್ತಿದ್ದರು ಎಂಬ ಸ್ಪಷ್ಟ ಮಾಹಿತಿ ನಮಗೆ ಇರಲಿಲ್ಲ. ಕೆಲವೊಮ್ಮೆ ಅವರು ಮನೆಗೆ ಬರುತ್ತಿದ್ದರು. ಎರಡು ತಿಂಗಳ ಹಿಂದೆಯಷ್ಟೇ ಅಮ್ಮನನ್ನು ಭೇಟಿಯಾಗಲು ಊರಿಗೆ ಬಂದು ಹೋಗಿದ್ದರು. ಆಮೇಲೆ ಎಲ್ಲಿದ್ದರು ಎಂಬ ಮಾಹಿತಿ ನಮಗೆ ಇರಲಿಲ್ಲ” ಎಂದು ತಿಳಿಸಿದ್ದಾರೆ.

“ಮೃತದೇಹವನ್ನು ನಗರದ ಕೇಂದ್ರ ಜುಮಾ ಮಸೀದಿ ಝೀನತ್ ಭಕ್ಷ್ ಮಸೀದಿಯಲ್ಲಿ ಸ್ನಾನ ಮಾಡಿಸಿ, ಬಳಿಕ ಸ್ವಗ್ರಾಮವಾದ ವಯನಾಡಿಗೆ ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಪೊಲೀಸ್ ಬಂದೋಬಸ್ತಿನಲ್ಲಿ ಕೇರಳ-ಕರ್ನಾಟಕದ ಗಡಿ ಭಾಗವಾದ ತಲಪಾಡಿಯ ತನಕ ಕೊಂಡೊಯ್ಯಲಾಗಿತ್ತು. ಆ ಬಳಿಕ ಆ್ಯಂಬುಲೆನ್ಸ್‌ನಲ್ಲಿ ವಯನಾಡ್‌ಗೆ ಕೊಂಡೊಯ್ಯಲಾಗಿದೆ” ಎಂದು ಈ ಪ್ರಕರಣ ಬೆಳಕಿಗೆ ತರಲು ಶ್ರಮಿಸಿದ್ದ ದ.ಕ. ಜಿಲ್ಲಾ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ಈದಿನ ಡಾಟ್ ಕಾಮ್‌ಗೆ ತಿಳಿಸಿದ್ದಾರೆ.

1000329988
ಈದಿನ ಡಾಟ್ ಕಾಮ್‌ಗೆ ಕುಟುಂಬಸ್ಥರು ಕಳುಹಿಸಿರುವ ಅಶ್ರಫ್ ಅವರ ಹಳೆಯ ಫೋಟೋ

ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರ ಪ್ರಕ್ರಿಯೆಯ ವೇಳೆ ಕಾಂಗ್ರೆಸ್‌ನ ಮುಖಂಡರಾದ ಶಾಹುಲ್ ಹಮೀದ್ ಕೆ.ಕೆ.
ಸುಹೈಲ್ ಕಂದಕ್, ಮಾಜಿ ಮೇಯರ್ ಅಶ್ರಫ್, ವಹಾಬ್ ಕುದ್ರೋಳಿ, ಅನ್ವರ್ ಸಾದತ್ ಬಜತ್ತೂರು,ಅನಸ್ ವಿಟ್ಲ, ಜಲೀಲ್ ಕೃಷ್ಣಾಪುರ, ಮುನೀರ್ ಕಾಟಿಪಳ್ಳ, ಇಮ್ತಿಯಾಝ್ ಬಿ.ಕೆ, ರಿಯಾಝ್ ಕಡಂಬು, ಸುನಿಲ್ ಬಿಜಿಲಕೇರಿ, ಸೋಶಿಯಲ್ ಫಾರೂಕ್, ಲಾರೆನ್ಸ್ ಡಿಸೋಜ, ಮುಹಮ್ಮದ್ ಬಪ್ಪಳಿಗೆ, ಸಂತೋಷ್ ಬಜಾಲ್, ಯು ಟಿ ತೌಸೀಫ್, ಶಫೀಕ್ ಅರಫಾ, ಅನಸ್, ಇಸ್ಮಾಯೀಲ್, ಕೇರಳದ ಕಾಂಗ್ರೆಸ್ ಮುಖಂಡರಾದ ಹರ್ಷದ್ ವರ್ಕಾಡಿ ಸೇರಿದಂತೆ ಇನ್ನಿತರ ಹಲವು ನಾಯಕರು ಉಪಸ್ಥಿತರಿದ್ದರು.

ಈ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...