ತುಂಗಾಭದ್ರಾ ಜಲಾಶಯದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ: ಡಿಕೆ ಶಿವಕುಮಾರ್

Date:

  • ಸಚಿವ ಶಿವರಾಜ್‌ ತಂಗಡಗಿ ನೇತೃತ್ವದಲ್ಲಿ ಸಲಹಾ ಸಮಿತಿ ರಚನೆ
  • ‘ತುಂಗಭದ್ರಾ ಜಲಾಶಯದಲ್ಲಿ 83 ಟಿಎಂಸಿ ನೀರು ಸಂಗ್ರಹವಾಗಿದೆ’

ರೈತರ ಬೇಡಿಕೆ ಹಿನ್ನೆಲೆಯಲ್ಲಿ ತುಂಗಭದ್ರಾ ಅಣೆಕಟ್ಟೆ ಮೂಲಕ ನೀರು ಹರಿಸುವಂತೆ ಜಿಲ್ಲಾ ಸಚಿವರು, ಶಾಸಕರು ಕೇಳುತ್ತಿದ್ದಾರೆ. ತುಂಗಾಭದ್ರಾದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಡಿಸಿಎಂ ಮತ್ತು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್‌ ತಿಳಿಸಿದರು.

ದೆಹಲಿ ಪ್ರವಾಸದಲ್ಲಿರುವ ಡಿಕೆ ಶಿವಕುಮಾರ್‌ ಗುರುವಾರ ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿ, “ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ತುಂಗಭದ್ರಾ ಅಣೆಕಟ್ಟೆ ಮೂಲಕ ನೀರು ಹರಿಸಲು ಒತ್ತಡ ಬಂದ ಹಿನ್ನೆಲೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ” ಎಂದರು.

ತುಂಗಭದ್ರಾ ಜಲಾಶಯದಲ್ಲಿ 105 ಟಿಎಂಸಿ ನೀರು ಶೇಖರಣಾ ಸಾಮರ್ಥ್ಯವಿದ್ದು, ಈಗಾಗಲೇ 83 ಟಿಎಂಸಿ ನೀರು ಸಂಗ್ರಹವಾಗಿದೆ. ರೈತರಿಂದ ಬಹಳ ಬೇಡಿಕೆ ಇರುವ ಕಾರಣ 5,575 ಕ್ಯೂಸೆಕ್ಸ್ ನೀರನ್ನು ಹರಿಸಲು ಅನುಮತಿ ನೀಡಲಾಗಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ: ಆರಗ ವಿರುದ್ಧ ಪ್ರಿಯಾಂಕ್‌ ಕಿಡಿ

ಸಚಿವ ಶಿವರಾಜ್‌ ತಂಗಡಗಿ ನೇತೃತ್ವದಲ್ಲಿ ಸಲಹಾ ಸಮಿತಿ

“ಸಚಿವ ಶಿವರಾಜ್ ತಂಗಡಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ, ತುಂಗಭದ್ರಾ ಸಲಹಾ ಸಮಿತಿ ರಚಿಸಲಾಗಿದೆ. ಬರುವ ದಿನಗಳಲ್ಲಿ ಇವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಸಲಹಾ ಸಮಿತಿ ಸಭೆ ಮಾಡಿ, ರೈತರ ಬೆಳೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವ, ಯಾವ ಕಾಲಕ್ಕೆ ಎಷ್ಟು ನೀರು ಬಿಡಬೇಕು ಎಂಬುದನ್ನು ತೀರ್ಮಾನಿಸಲಾಗುವುದು” ಎಂದರು.

“ಟಿಎಲ್‌ಬಿಸಿಗೆ ಸುಮಾರು 1300 ರಿಂದ 1500 ಕ್ಯೂಸೆಕ್ಸ್, ಆರ್ ಬಿಎಲ್ ಸಿಯಲ್ಲಿ 1200 ಕ್ಯೂಸೆಕ್ಸ್, ಆರ್ ಎಚ್ ಬಿಎಲ್ ಸಿಗೆ 1375 ಕ್ಯೂಸೆಕ್‌ ನೀರು ನೀಡಬೇಕಾಗಿದೆ. ಇದರ ಜತೆಗೆ ಆಂಧ್ರ ಪ್ರದೇಶದ ಪಾಲಿನ ನೀರನ್ನು ಬಿಡಬೇಕಾಗಿದ್ದು, ಒಟ್ಟು 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ ನೀಡಲಾಗಿದೆ. ಈ ಮೂಲಕ ರೈತರ ಬೇಡಿಕೆಗೆ ಸ್ಪಂದಿಸಿದ್ದೇವೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಸರ್ಕಾರಕ್ಕೆ ಪ್ರತಿಯಾಗಿ ಅಧಿವೇಶನದಲ್ಲಿ ನಿರ್ಣಯ ಮಂಡಿಸಿದ ಬಿಜೆಪಿ

ತೆರಿಗೆ ಅನ್ಯಾಯ ವಿಚಾರವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ಖಂಡನಾ...

ಇಂಡಿಯಾ ಒಕ್ಕೂಟಕ್ಕೆ ಹೆದರಿ ಅರವಿಂದ್ ಕೇಜ್ರಿವಾಲ್‌ ಬಂಧಿಸಲು ಕೇಂದ್ರದಿಂದ ಸಂಚು: ಮೋಹನ್ ದಾಸರಿ

"ಇಂಡಿಯಾ ಒಕ್ಕೂಟದಲ್ಲಿ ಎಎಪಿ-ಕಾಂಗ್ರೆಸ್ ನಡುವೆ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ...

ಮಂಡ್ಯ | ನನಗೆ ಬೇರೆಡೆ ಟಿಕೆಟ್​ ಪಡೆಯುವುದು ಕಷ್ಟವಲ್ಲ: ಸುಮಲತಾ ಅಂಬರೀಶ್

ನಿನ್ನೆ(ಫೆ.22) ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ...

ರೈಲಿಗೆ ಬೆಂಕಿ ಹಚ್ಚಿ ಸುಡುತ್ತೇವೆ ಎಂದವರನ್ನು ಒದ್ದು ಒಳಗೆ ಹಾಕಬೇಕು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ...