ಉಡುಪಿ‌ | ಸೆ – 30ರ ವರಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ – ಡಿಸಿ

Date:

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಜೂನ್ 15 ರಿಂದ ಸೆಪ್ಟಂಬರ್ 30 ರ ವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

- Advertisement -

ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...