ಕಲಬುರಗಿ| ಅಂಗನವಾಡಿ ಕಾರ್ಯಕರ್ತರಿಂದ ಅಹೋರಾತ್ರಿ ಧರಣಿ

Date:

ಅಂಗನವಾಡಿ ಕಾರ್ಯಕರ್ತರನ್ನು ಹಾಗೂ ಸಹಾಯಕಿಯರನ್ನು ಕಾಯಂಗೊಳಿಸಬೇಕು. ಅಂಗನವಾಡಿ ಕಟ್ಟಡಗಳ ಬಾಕಿಯಿರುವ ಬಾಡಿಗೆ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಅಹೋರಾತ್ರಿ ಧರಣಿ ಆರಂಭಿಸಿದರು.

- Advertisement -

ರಾಜ್ಯ ಸಿಐಟಿಯು ಘಟಕದಿಂದ ಬೆಳಗಾವಿ ಸುವರ್ಣಸೌಧದ ಬಳಿ ನಡೆಯುತ್ತಿರುವ ಹೋರಾಟದ ಭಾಗವಾಗಿ ಎರಡು ದಿನಗಳ ಹೋರಾಟಕ್ಕೆ ಬೆಂಬಲಿಸಿ ನೂರಾರು ಕಾರ್ಯಕರ್ತರು ಅಹೋರಾತ್ರಿ ಧರಣಿ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಸಿಐಟಿಯು ಅಧ್ಯಕ್ಷೆ ಗೌರಮ್ಮ ಪಾಟೀಲ್ ಮಾತನಾಡಿ,ʼ ಗುಜರಾತ್ ಹೈಕೊರ್ಟ್ ತೀರ್ಪಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂಗೊಳಿಸಬೇಕು. 2018ರಿಂದ ಕೇಂದ್ರ ಸರಕಾರ ಯಾವುದೇ ಗೌರವಧನ ಹೆಚ್ಚಳ ಮಾಡದೇ ಇರುವುದರಿಂದ ಕೂಡಲೇ ₹26 ಸಾವಿರ ಗೌರವಧನ ಹೆಚ್ಚಿಸಬೇಕು. 2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷ ಘೋಷಿಸಿದಂತೆ ₹15 ಸಾವಿರ ಗೌರವಧನ ಹೆಚ್ಚಿಸಬೇಕುʼ ಎಂದು ಆಗ್ರಹಿಸಿದರು.

ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತಿದೆ. ಅಂಗನವಾಡಿಗಳಲ್ಲಿ ಪೂರಕ ಪೌಷ್ಠಿಕ ಆಹಾರದ ಬದಲು ಸಂಪೂರ್ಣ ಆಹಾರ ನೀಡಬೇಕು. ಗ್ರಾಜ್ಯುಟಿ ಅನುದಾನದ ಬಿಡುಗಡೆ, ಅನುದಾನ ಹೆಚ್ಚಿಸಬೇಕು. ನಿವೃತ್ತಿಯಾದವರಿಗೆ ಇಡಿಗಂಟು ₹10 ಸಾವಿರ ಮಾಸಿಕ ಪಿಂಚಣಿ, ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್‌ಕೆಜಿ ಯುಕೆಜಿ ಪ್ರಾರಂಭಿಸಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡುವುದು ಸೇರಿದಂತೆ 20 ಬೇಡಿಕೆ ಈಡೇರಿಕೆಗೆ ಪ್ರತಿಭಟನಾ ನಿರತ ಕಾರ್ಯಕರ್ತರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ, ಬೀದರ್‌, ವಿಜಯಪುರ ಜಿಲ್ಲೆಗಳಲ್ಲಿ ಶೀತ ಅಲೆ ಮುಂದುವರಿಕೆ ಸಾಧ್ಯತೆ

ಪ್ರತಿಭಟನೆಯಲ್ಲಿ ಸಿಐಟಿಯು ಪ್ರಮುಖರಾದ ಶಾಂತಾ ಘಂಟೆ, ಗೌರಮ್ಮ ಪಾಟೀಲ್, ರಾಜಮತಿ, ಮಹದೇವಮ್ಮ, ಕೆ.ನೀಲಾ, ಶರಣಬಸಪ್ಪ ಮಮಶೆಟ್ಟಿ, ಶ್ರೀಮಂತ ಬಿರಾದಾರ, ಎಂ.ಬಿ.ಸಜ್ಜನ್, ಕಾಶಿನಾಥ ಬಂಡಿ, ಭೀಮಶೇಟ್ಟಿ ಯಂಪಳ್ಳಿ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನ ನೂರಾರು ಅಂಗನವಾಡಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...