ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಬಸವರಾಜ ಪಾಟೀಲ್ ಇಟಗಿ ನೇಮಕ

Date:

Advertisements

ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಎಐಸಿಸಿ ಮತ್ತು ಕೆಪಿಸಿಸಿ ನಾಯಕರು ಬಸವರಾಜ ಪಾಟೀಲ್ ಇಟಗಿಯವರನ್ನು ನೇಮಿಸುವ ಮೂಲಕ ಸಮತೋಲಿತ ಕಾಪಾಡಿದ್ದು, ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ನಿರ್ವಹಿಸುವ ಮೂಲಕ ಚುನಾವಣೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎ ವಸಂತಕುಮಾರ ಹೇಳಿದರು.

ರಾಯಚೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜವನ್ನು ಬಸವರಾಜ ಪಾಟೀಲ್ ಇಟಗಿಯವರಿಗೆ ನೀಡುವ ಮೂಲಕಚಾಲನೆ ನೀಡಿ ಮಾತನಾಡಿದರು.

“ಕಳೆದ ಕೆಲ ದಿನಗಳಿಂದ ಕಾರಣಾಂತರಗಳಿಂದ ಖಾಲಿ ಉಳಿದಿದ್ದ ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಎಐಸಿಸಿ ಮತ್ತು ಕೆಪಿಸಿಸಿ ನಾಯಕ ಬಸವರಾಜ ಪಾಟೀಲ್ ಇಟಗಿಯವರನ್ನು ನೇಮಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ” ಎಂದು ಹೇಳಿದರು.

Advertisements

“ಕಾಂಗ್ರೆಸ್ ಪಕ್ಷಕ್ಕೆ ಸುಧೀರ್ಘ ಇತಿಹಾಸವಿದ್ದು ಆರ್ ಆಂಜನೇಯ ಅವರಿಂದ ಹಿಡಿದು ಬಿ ವಿ ನಾಯಕರವರೆಗೆ ಅನೇಕರು ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ ಶಾಂತಪ್ಪ, ಬಸವರಾಜ ಪಾಟೀಲ್ ಇಟಗಿ, ಮಲ್ಲಿಕಾರ್ಜುನ ಯದ್ದಲದಿನ್ನಿ ಇವರ ಹೆಸರು ಶಿಫಾರಸು ಮಾಡಲಾಗಿತ್ತು. ಕೊನೆಗೆ ಶಾಸಕರು, ಮಾಜಿ ಶಾಸಕರುಗಳು ಪಕ್ಷದ ಮುಖಂಡರ ಅಭಿಪ್ರಾಯದ ಮೇರೆಗೆ ಬಸವರಾಜ ಪಾಟೀಲ್ ಇಟಗಿಯವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ” ಎಂದರು.

“ಕೆ ಶಾಂತಪ್ಪ ಮತ್ತು ರಾಮಣ್ಣ ಇರಬಗೇರಾ ಇವರನ್ನು ಕೆಪಿಸಿಸಿ ಕಾರ್ಯದರ್ಶಿಗಳನ್ನಾಗಿ ನೇಮಿಸಿ ಅಧಿಕಾರವನ್ನು ನೀಡಲಾಗಿದೆ. ನೂತನವಾಗಿ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಬಸವರಾಜ ಪಾಟೀಲ್ ಇಟಗಿಯವರ ಮುಂದೆ ಅನೇಕ ಸವಾಲುಗಳಿವೆ. ಭಿನ್ನಾಭಿಪ್ರಾಯ ಹೊಂದಿದವರು ಸೇರಿ ಎಲ್ಲರನ್ನೂ ಸಹಿಸಿಕೊಳ್ಳುವ ಮೂಲಕ ಪಕ್ಷದ ಸಂಘಟನೆ ಮಾಡುವ ಚಾಣಕ್ಷತನ ಪ್ರದರ್ಶಿಸಬೇಕಿದೆ. ಅವರು ಎಲ್ಲವನ್ನೂ ಸಮರ್ಥವಾಗಿ ನಿರ್ವಹಿಸಬಲ್ಲರು” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಈಗಾಗಲೇ ಪಕ್ಷದ ಅಭ್ಯರ್ಥಿಯಾಗಿ ಜಿ ಕುಮಾರನಾಯಕ ಇವರನ್ನು ಪಕ್ಷ ಘೊಷಣೆ ಮಾಡಿದೆ. ಇವರು ಎಲ್ಲ ವಿಧಾನಸಭಾ ಕ್ಷೇತ್ರಗಳ ಪಕ್ಷದ ಮುಖಂಡರ ಸಭೆ ನಡೆಸಿದ್ದಾರೆ. ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡಿದ ಎಲ್ಲ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಸೋತಿರುವ ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರ ಮುನಿಸಿನಿಂದ ಸೋಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ನಾನೇ ಅಭ್ಯರ್ಥಿ ಎಂದು ತಿಳಿದು ಚುನಾವಣೆ ಎದುರಿಸುವ ಮೂಲಕ ಬಿಜೆಪಿ ನೇತ್ವತ್ವ ಸರ್ಕಾರವನ್ನು ತೆಗೆದುಹಾಕಲು ಪಣ ತೊಡಬೇಕು” ಎಂದರು.

ಪಕ್ಷದ ಹಿರಿಯ ಮುಖಂಡ ಪಾರಮಸಲ್ ಸುಖಾಣ ಮಾತನಾಡಿ, “ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನೀಡಿರುವ 25 ಗ್ಯಾರಂಟಿಗಳನ್ನು ಜನರಿಗೆ ತಲುಪಿಸಿದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ ಬಾರಿಸುತ್ತಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗೂಡಿ ಪಕ್ಷದ ಅಭ್ಯರ್ಥಿ ಜಿ ಕುಮಾರನಾಯಕರನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

“ದೇವದುರ್ಗ ತಾಲೂಕಿನವರೇ ಮತ್ತೊಮ್ಮೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದು ಬಸವರಾಜ ಪಾಟೀಲ್ ಇಟಗಿ ನೇತೃತ್ವದಲ್ಲಿ ಎಲ್ಲರು ಸಹಕರಿಸಿ ಅಧಿಕಾರ ತರುವಲ್ಲಿ ಪ್ರಯತ್ನಿಸಬೇಕು” ಎಂದು ಕರೆ ನೀಡಿದರು.

ಕಾಂಗ್ರೆಸ್‌ನ ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರು ಮಾತನಾಡಿ, “ಕಾಂಗ್ರೆಸ್ ಪಕ್ಷದ ಎಲ್ಲರೂ ಸೇರಿದರೆ ಪಕ್ಷಕ್ಕೆ ಸೋಲಿಲ್ಲ. ಆದರೆ ಪಕ್ಷದಲ್ಲಿ ಅಭಿಪ್ರಾಯಗಳಿರಬೇಕೇ ಹೊರತು ಭಿನ್ನಾಭಿಪ್ರಾಯಗಳಿಂದ ಪಕ್ಷಕ್ಕೆ ಧಕ್ಕೆ ತರುವ ಕೆಲಸವಾಗಬಾರದು. ಬಸವರಾಜ ಪಾಟೀಲ್ ಇಟಗಿಯವರು ಹಿರಿಯರು, ಕಿರಿಯರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸುವ ಮೂಲಕ ಕಾಂಗ್ರೆಸ್‌ಗೆ ಗೆಲುವು ತರುವ ಕೆಲಸ ಮಾಡಬೇಕು” ಎಂದರು.

ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, “ಗ್ರಾಮೀಣ ಪ್ರದೇಶದಿಂದ ಕೇಂದ್ರದವರಗೆ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಿಷ್ಟಗೊಳಿಸುವ ಕೆಲಸವಾಗಬೇಕಿದೆ. ದೇಶದಲ್ಲಿ ಕಾಂಗ್ರೆಸ್ ಬಲವಾಗಿರುವುದನ್ನು ಒಪ್ಪಲೇಬೇಕು. ಆದರೆ ಎಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡಿದರೆ ಪಕ್ಷ ಅಧಿಕಾರಕ್ಕೆ ಬರುವ ಸಂಶಯವೇ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವುಕುಮಾರ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಸೇರಿ ಕೆಲಸ ಮಾಡಿದರೆ 20ಕ್ಕೂ ಅಧಿಕ ಸ್ಥಾನ ಗೆಲ್ಲುತ್ತೇವೆ. ರಾಯಚೂರು ಕ್ಷೇತ್ರದ ಅಭ್ಯರ್ಥಿ ಜಿ ಕುಮಾರನಾಯಕ ಗೆಲುವಿಗೆ ಬ್ಲಾಕ್ ಮಟ್ಟದಿಂದ ಎಲ್ಲ ಮುಖಂಡರೂ ಶ್ರಮಿಸಬೇಕು” ಎಂದು ಕರೆ ನೀಡಿದರು.

ಗ್ರಾಮೀಣ ಶಾಸಕ ದದ್ದಲ ಬಸನಗೌಡ ಮಾತನಾಡಿ, “ಕಾಂಗ್ರೆಸ್ ಪಕ್ಷಕ್ಕೆ ಇತಿಹಾಸವಿದ್ದು, ಪಕ್ಷ ಸಮುದ್ರವಿದ್ದಂತೆ. ಪಕ್ಷದ ಕಾರ್ಯಕರ್ತರು ಅಧಿಕಾರ ಸಿಕ್ಕಿಲ್ಲವೆಂದು ಬೇಸರಪಟ್ಟುಕೊಳ್ಳದೆ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು. ಪಕ್ಷ ಅಧಿಕಾರಕ್ಕೆ ಬಂದರೆ ಇಂದಲ್ಲ ನಾಳೆ ನಿಮ್ಮ ಮನೆಗೆ ಅಧಿಕಾರ ಬರುತ್ತದೆ. ಪಕ್ಷಕ್ಕೆ ದ್ರೋಹ ಬಗೆದರೆ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದರು.

“ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಮನೆ ಮನೆಗೆ ತೆರಳಿದ್ದು, ಜನರ ವಿಶ್ವಾಸ ಗಳಿಸಿದೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಒಟ್ಟಾಗಿ ಕೆಲಸ ಮಾಡಬೇಕು. ಪಕ್ಷದ ಗೆಲವು ನಮ್ಮ ನಿಮ್ಮಲ್ಲೆರ ಗೆಲುವಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ದೂರು ದಾಖಲು

ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರು, ಮಾಜಿ ಶಾಸಕ ಸೈಯದ್ ಯಾಸೀನ್, ಕೆಪಿಸಿಸಿ ಕಾರ್ಯದರ್ಶಿ ರಾಮಣ್ಣ ಇರಬಗೇರಾ, ಮಹ್ಮದ ಶಾಲಂ, ಜಿ ಬಸವರಾಜರೆಡ್ಡಿ, ರಾಜಶೇಖರ ನಾಯಕ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪಾಮಯ್ಯ ಮುರಾರಿ, ಅಬ್ದುಲ್ ಕರೀಂ, ಸಾಜೀದ್ ಸಮೀರ್, ಆಂಜಿನೇಯ್ಯ ಕುರಬದೊಡ್ಡಿ, ಜಿ‌ ಶಿವಮೂರ್ತಿ, ತಾಯಣ್ಣನಾಯಕ, ದೇವಣ್ಣನಾಯಕ, ಪ್ರೇಮಲತಾ, ಶಶಿಕಲಾ ಭೀಮರಾಯ ಸೇರಿದಂತೆ ಅನೇಕ ಮುಖಂಡರುಗಳು ಇದ್ದರು.

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X